ದಾವಣಗೆರೆ: ಸರ್ಕಾರಿ ಶಾಲೆಯಲ್ಲಿ ಸಿಬ್ಬಂದಿ ಕೊರತೆ; ಪಾಲಿಕೆ ಸದಸ್ಯರ ಸಹಿತ ವಿದ್ಯಾರ್ಥಿಗಳಿಂದ ಪ್ರತಿಭಟನೆ
Update: 2023-07-31 06:53 GMT
ದಾವಣಗೆರೆ: ಶಾಲೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸುವಂತೆ ಅಗ್ರಹಿಸಿ ಇಲ್ಲಿನ ಎಸ್ ಪಿಎಸ್ ನಗರದ ಎರಡನೇ ಹಂತದಲ್ಲಿರುವ ಸರ್ಕಾರಿ ಶಾಲೆಯ ಎಸ್ ಡಿಎಂಸಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
560 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿರುವ ಈ ಸರಕಾರಿ ಶಾಲೆಯಲ್ಲಿ ಶಿಕ್ಷಕರ, ಸ್ವಚ್ಛತೆ ಕೊರತೆ ಇದ್ದು, ಈ ಬಗ್ಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಡಳಿತ ಈ ಬಗ್ಗೆ ಕ್ರಮ ವಹಿಸಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾ ನಿರತರು ಎಚ್ಚರಿಸಿದರು.
5 ನೇ ವಾಡ್೯ನ ಪಾಲಿಕೆ ಸದಸ್ಯರಾದ ಸುಧಾ, ಇಟ್ಡಿಗುಡಿ ಮಂಜುನಾಥ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.