ಬಿಜೆಪಿಯವರ ಮಾತು ಕೇಳಿ 15 ಬಿಲ್‌ಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ : ಡಿಸಿಎಂ ಡಿ.ಕೆ.ಶಿವಕುಮಾರ್

Update: 2024-08-23 09:09 GMT

ಬೆಂಗಳೂರು :"ಬಿಜೆಪಿಯ ಶಾಸಕರುಗಳ ಮಾತುಕೇಳಿ 15 ಬಿಲ್‌ಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು "ಬಿಜೆಪಿಯವರ ಮಾತನ್ನೇ ಕೇಳುವುದಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಏಕಿರಬೇಕು. ಏನಾದರು ಸ್ಪಷ್ಟನೆ ಕೇಳಿದರೆ ನೀಡೋಣ. ಅದನ್ನು ತಪ್ಪು ಎಂದು ಹೇಳಲಾಗುವುದಿಲ್ಲ. ರಾಜ್ಯಪಾಲರಿಗೆ ದೇವರು ಒಳ್ಳೆ ಬುದ್ದಿ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ" ಎಂದರು.

ಜಿಂದಾಲ್ ಗೆ ಭೂಮಿ ಮಾರಾಟ ಮಾಡಿದ್ದನ್ನು ಈ ಹಿಂದೆ ವಿರೋಧಿಸಿದ್ದ ಕಾಂಗ್ರೆಸ್ ಅದೇ ಜಿಂದಾಲ್ ಗೆ ಭೂಮಿ ಮಾರಾಟ ಮಾಡಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, "ಉದ್ಯೋಗ ಸೃಷ್ಟಿಯಾಗಬೇಕು. ರಾಜ್ಯಕ್ಕೆ ಕೈಗಾರಿಕೆಗಳು ಬರಬೇಕು. ಕರ್ನಾಟಕದಲ್ಲಿ ಇರುವ ಕೈಗಾರಿಕಾ ಕಾನೂನಿಗೆ ತಕ್ಕಂತೆ ಅವರಿಗೆ ಭೂಮಿ ನೀಡಿದ್ದೇವೆ. ನಾವು ಅವರಿಗೆ ಹೊಸದಾಗಿ ಭೂಮಿ ಕೊಟ್ಟಿಲ್ಲ. ಈ ಹಿಂದೆ ಕೊಟ್ಟಿದ್ದನ್ನೇ ಪರಿಶೀಲಿಸಿ ಸೇಲ್ ಡೀಡ್ ಮಾಡಿಕೊಟ್ಟಿದ್ದೇವೆ. ಸಾವಿರಾರು ಲಕ್ಷಾಂತರ ಜನ ಕೈಗಾರಿಕೆಗಳಿಗೆ ಅನುಕೂಲ ಮಾಡಿಕೊಟ್ಟಂತೆ ಇಲ್ಲಿಯೂ ಅದನ್ನೇ ಮಾಡಲಾಗಿದೆ. ಬಿಜೆಪಿಯವರು ಮಾಡಿದ್ದನ್ನು ನಾವು ಸರಿ ಮಾಡಿಕೊಟ್ಟಿದ್ದೇವೆ" ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News