ಜಾತಿಗಣತಿ | ನಾಳೆ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರ ಜತೆ ಚರ್ಚೆ: ಡಿಸಿಎಂ ಡಿ.ಕೆ.ಶಿವಕುಮಾರ್

Update: 2025-04-14 18:33 IST
Photo of DK Sivakumar

 ಡಿ.ಕೆ.ಶಿವಕುಮಾರ್

  • whatsapp icon

ಬೆಂಗಳೂರು : “ಜಾತಿಗಣತಿ ವಿಚಾರವಾಗಿ ನಾಳೆ (ಮಂಗಳವಾರ) ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಶಾಸಕರ ಜತೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಜಾತಿಗಣತಿ ವರದಿ ಕುರಿತ ಮಾಧ್ಯಮದವರ ಪ್ರಶ್ನೆಗೆ ಕೆಪಿಸಿಸಿ ಕಚೇರಿ ಬಳಿ ಪ್ರತಿಕ್ರಿಯಸಿದ ಅವರು, “ನಾನು ಜಾತಿ ಗಣತಿ ವರದಿಯನ್ನು ಸಂಪೂರ್ಣವಾಗಿ ನೋಡಿಲ್ಲ, ಅದರ ಅಧ್ಯಯನ ಮಾಡಲಾಗುತ್ತಿದೆ. ನಾಳೆ ಕಾಂಗ್ರೆಸ್ ಪಕ್ಷದ ನಮ್ಮ ಸಮುದಾಯದ ಶಾಸಕರ ಸಭೆ ಕರೆದಿದ್ದೇನೆ. ಅವರ ಜತೆ ಚರ್ಚೆ ಮಾಡಿ, ಯಾರ ಮನಸ್ಸಿಗೂ ನೋಯಿಸದೇ ಎಲ್ಲರ ಗೌರವ ಕಾಪಾಡಲು ಸಲಹೆ ನೀಡುತ್ತೇವೆ” ಎಂದು ತಿಳಿಸಿದರು.

ಎಲ್ಲರಿಗೂ ನ್ಯಾಯ ಒದಗಿಸುವ ಪಕ್ಷ ಕಾಂಗ್ರೆಸ್ :

ಧರ್ಮದ ಆಧಾರದಲ್ಲಿ ಟೆಂಡರ್ ನೀಡಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಹಕ್ಕುಗಳನ್ನು ಕಾಂಗ್ರೆಸ್ ಸರಕಾರ ಕಸಿಯುತ್ತಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ, "ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೂ ಮೀಸಲಾತಿ ನೀಡಲಾಗಿದೆ. ಸಮಾಜದಲ್ಲಿ ಯಾರು ಆರ್ಥಿಕವಾಗಿ ಹಿಂದುಳಿದಿದ್ದಾರೋ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ನಮ್ಮ ಆದ್ಯತೆ. ಕಾಂಗ್ರೆಸ್ ಪಕ್ಷ ಸಮಾಜದ ಎಲ್ಲಾ ವರ್ಗಗಳಿಗೂ ನ್ಯಾಯ ಒದಗಿಸುವ ಪಕ್ಷ" ಎಂದರು.

ಒಬಿಸಿಗಳ ಮೀಸಲಾತಿಯನ್ನು ಕಾಂಗ್ರೆಸ್ ಕಿತ್ತುಕೊಂಡಿದೆ ಎನ್ನುವ ಪ್ರಧಾನಿ ಮೋದಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಂಡಿಲ್ಲ. ಬೆಂಗಳೂರಿನ ಸಂಸದರೊಬ್ಬರು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಎದೆ ಸೀಳಿದರೆ ಅಕ್ಷರವಿಲ್ಲ, ಪಂಕ್ಚರ್ ಹಾಕಲು ಮಾತ್ರ ಸೀಮಿತ ಎಂದು ದ್ವೇಷಕಾರಿದ್ದರು. ಆದರೆ ನಾವು ಆ ಸಮುದಾಯ ಇತರೇ ಕೆಲಸಗಳನ್ನು ಮಾಡಲು ಸಾಮರ್ಥ್ಯ ಹೊಂದಿದೆ ಎಂದು ತೋರಿಸಬೇಕಾಗಿದೆ" ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News