ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸುವ ಭರವಸೆ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್

Update: 2023-07-12 18:41 GMT

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಬಾಕಿ ಮೊತ್ತ ಬಿಡುಗಡೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಕುರಿತು ಚರ್ಚಿಸಿದರು. ಈ ವೇಳೆ ಶೀಘ್ರವೇ ಬಾಕಿ ಮೊತ್ತ ಬಿಡುಗಡೆ ಮಾಡುವುದಾಗಿ ಉಪಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸಂದರ್ಭದಲ್ಲಿ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ, ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್, ಅಂಬಿಕಾಪತಿ, ಕಾರ್ಯಾಧ್ಯಕ್ಷ ಜಿ. ಎಂ.ರವೀಂದ್ರ, ಪ್ರಧಾನ ಕಾರ್ಯದರ್ಶಿ ನಂದಕುಮಾರ್, ಉಪಾಧ್ಯಕ್ಷ ಹನುಮಂತಯ್ಯ, ಜಂಟಿ ಕಾರ್ಯದರ್ಶಿ ಕೆ.ಶ್ರೀನಿವಾಸ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News