ಬೆಂಗಳೂರು | 1800 ಕೋಟಿ ರೂ. ವೆಚ್ಚದಲ್ಲಿ ವೈಟ್ ಟಾಪಿಂಗ್ ಯೋಜನೆ : ಡಿಸಿಎಂ ಡಿ.ಕೆ.ಶಿವಕುಮಾರ್

Update: 2024-07-15 07:16 GMT

ಬೆಂಗಳೂರು: "ಬೆಂಗಳೂರಿನ ರಸ್ತೆಗಳು ಪದೇ ಪದೆ ಕಿತ್ತು ಬರುತ್ತಿರುವ ಹಿನ್ನೆಲೆಯಲ್ಲಿ ಶಾಶ್ವತ ರಸ್ತೆಗಳನ್ನು ನಿರ್ಮಿಸಲು 1800 ಕೋಟಿ ರೂ. ವೆಚ್ಚದಲ್ಲಿ 157 ಕಿ.ಮೀ ವೈಟ್ ಟಾಪಿಂಗ್ ರಸ್ತೆ ನಿರ್ಮಿಸಲಿದ್ದೇವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

"ಬ್ರ್ಯಾಂಡ್ ಬೆಂಗಳೂರು, ಸುಗಮ ಸಂಚಾರ ಬೆಂಗಳೂರು" ಪರಿಕಲ್ಪನೆಯಡಿ ಚಾಮರಾಜಪೇಟೆ, ಗಾಂಧಿನಗರ, ಮಲ್ಲೇಶ್ವರಂ, ಮಹಾಲಕ್ಷ್ಮೀಪುರಗಳಲ್ಲಿ 200 ಕೋಟಿ ರೂ. ವೆಚ್ಚದಲ್ಲಿ 19.67 ಕಿ.ಮೀ ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಕಾಮಗಾರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೋಮವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, "ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಗುಂಡಿಗಳು ಬೀಳಬಾರದು ಎಂಬ ಉದ್ದೇಶದಿಂದ ವೈಟ್ ಟಾಪಿಂಗ್ ರಸ್ತೆ ಮಾಡಲಾಗುತ್ತಿದೆ. ಈ ರಸ್ತೆಗಳು ಸುಮಾರು 25 ವರ್ಷಗಳ ಕಾಲ ಬಾಳಿಕೆ ಬರುತ್ತವೆ" ಎಂದು ಹೇಳಿದರು.

ʼನಿತ್ಯ ಮೂರ್ನಾಲ್ಕು ವಾರ್ಡ್‌ಗಳಲ್ಲಿ ಈ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗುವುದು. ಕಾಲಮಿತಿಯಲ್ಲಿ ಈ ಕಾಮಗಾರಿ ಪೂರ್ಣಗೊಳಿಸಲಾಗುವುದು. ಸಂಚಾರ ದಟ್ಟಣೆ ಸಮಸ್ಯೆ ಬಗೆಹರಿಸಲು 200 ಕಿ.ಮೀ ನಷ್ಟು ಹೊಸ ರಸ್ತೆ ನಿರ್ಮಾಣ ಮಾಡಲು ತೀರ್ಮಾನ ಮಾಡಿದ್ದು, ಉನ್ನತ ಗುಣಮಟ್ಟಕ್ಕಾಗಿ ವೈಟ್ ಟಾಪಿಂಗ್ ಮಾಡಲು ಸೂಚಿಸಲಾಗಿದೆ" ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News