ಗುತ್ತಿಗೆದಾರರ ಬಿಲ್ ಪಾಸ್ ಮಾಡಲು ವಿಳಂಬ; ದೂರು ನೀಡಿದರೆ ತನಿಖೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2024-02-03 09:45 GMT

ಬೆಂಗಳೂರು: ಕಾಮಗಾರಿಯ ಬಿಲ್ ಪಾಸ್ ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ ದೂರು ನೀಡಿದರೆ ತನಿಖೆ ಕೈಗೊಂಡು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸ್ ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಸಂಬಂಧ ಯಾರಾದರೂ ದೂರು ನೀಡಿದರೆ ಅವರ ವಿರುದ್ಧ ತನಿಖೆ ಕೈಗೊಂಡು ಕ್ರಮ ಕೈಗೊ‍ಳ್ಳುತ್ತೇವೆ ಎಂದರು.

ಅಭ್ಯರ್ಥಿ ಗಳ ಪಟ್ಟಿ ಆದಷ್ಟು ಶೀಘ್ರದಲ್ಲಿಯೇ ಸಿದ್ಧವಾಗಲಿದೆ

ಲೋಕಸಭಾ ಚುನಾವಣೆಗೆ ಎಲ್ಲರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು. ಅಭ್ಯರ್ಥಿ ಗಳ ಪಟ್ಟಿ ಆದಷ್ಟು ಶೀಘ್ರದಲ್ಲಿಯೇ ಸಿದ್ಧವಾಗಲಿದೆ ಎಂದರು. ಸಮೀಕ್ಷೆ ನಡೆಯುತ್ತಿದೆ ಎಂದರು. 

ಲೋಕಸಭಾ ಚುನಾವಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಗನಿಗೆ ಟಿಕೆಟ್ ಕೊಡಿವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಕೂಡ ಒಬ್ಬ ಟಿಕೆಟ್ ಆಕಾಂಕ್ಷಿಯಾಗಿ ಕೇಳುತ್ತಾರೆ. ಕಾಂಗ್ರೆಸ್ ನಲ್ಲಿ ಟಿಕೆಟ್ ಕೇಳುವವರೇ ಸಂಖ್ಯೆ ಜಾಸ್ತಿಯಿರುತ್ತದೆ. ಸ್ಥಳೀಯ ನಾಯಕರು, ಬ್ಲಾಕ್ ಸಮಿತಿ ಅಧ್ಯಕ್ಷ ರು, ಶಾಸಕರು, ಸಂಸದರ ಅಭಿಪ್ರಾಯ ಪಡೆದು ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.

ಸಿದ್ಧಗಂಗಸ್ವಾಮಿಗಳಿಗೆ ʼಭಾರತ ರತ್ನʼ ಕೊಡಬೇಕು

ಅಡ್ವಾಣಿಯವರಿಗೆ ಭಾರತ ರತ್ನ ದೊರೆತಿರುವ ಬಗ್ಗೆ ಮಾತನಾಡಿ ಕೊಡಲಿ, ಬೇಡ ಎಂದು ನಾವು ಹೇಳಿಲ್ಲ. ನಾನು ತುಮಕೂರು ಸಿದ್ಧಗಂಗಸ್ವಾಮಿಗಳಿಗೆ ಕೊಡಬೇಕು ಎಂದು ತಿಳಿಸಿ ಪತ್ರ ಬರೆದಿದ್ದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News