ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ನಾಳೆ ಪ್ರತಿಭಟನೆ : ಆರ್.ಅಶೋಕ್‌

Update: 2024-08-18 12:02 GMT

Screengrab : x/@BJP4Karnataka

ಬೆಂಗಳೂರು : ಮುಡಾ ಹಗರಣ ನಡೆಸಿದ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಸೋಮವಾರ ಬೆಳಗ್ಗೆ 11.30ಕ್ಕೆ ಪ್ರತಿಭಟಿನೆ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಕಾಂಗ್ರೆಸ್‌ನ ನಡಿಗೆ, ಭ್ರಷ್ಟಾಚಾರದ ಕಡೆಗೆ ಎಂಬಂತಾಗಿದೆ. ಈ ಸರಕಾರ ಬಂದಾಗ ಜನರು ಗ್ಯಾರಂಟಿಗಳ ಬಗ್ಗೆ ಭರವಸೆ ಇಟ್ಟುಕೊಂಡಿದ್ದರು. ಆದರೆ ಜನರ ಅಪೇಕ್ಷೆಗೆ ವಿರುದ್ಧವಾಗಿ ಸರಕಾರ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ 65 ಕೇಸುಗಳಿದ್ದು, ಅದನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ. ಅಂದಮೇಲೆ ಅವರು ಹೇಗೆ ಕ್ಲೀನ್ ಎನ್ನುವುದು ತಿಳಿದಿಲ್ಲ. ಈಗ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದನ್ನು ಕಾಂಗ್ರೆಸ್ ಸ್ವಾಗತ ಮಾಡಬೇಕಿತ್ತು‌. ತನಿಖೆಯಾಗಿ ಸ್ವಚ್ಛವಾಗಿ ಹೊರಬಂದರೆ ಕ್ಲೀನ್ ಎಂದು ನಂಬಬಹುದು. ಅದನ್ನು ಬಿಟ್ಟು ರಾಜ್ಯಾದ್ಯಂತ ಹೋರಾಟ ಮಾಡಲು ಮುಂದಾಗಿದ್ದಾರೆ" ಎಂದು ದೂರಿದರು.

ಸಿಎಂ ಸಿದ್ದರಾಮಯ್ಯ ಅಧಿವೇಶನದಲ್ಲಿ ಉತ್ತರ ಕೊಡದೆ ಪಲಾಯನ ಮಾಡಿದ್ದಾರೆ. ಜೊತೆಗೆ ಪ್ರಕರಣ ಮುಚ್ಚಿಹಾಕಲು ಬೇಕಾದವರನ್ನು ನೇಮಿಸಿದ್ದಾರೆ. ಹೈಕಮಾಂಡ್ ಕೂಡ ಸಿದ್ದರಾಮಯ್ಯ ಅವರ ಭ್ರಷ್ಟಾಚಾರವನ್ನು ಬೆಂಬಲಿಸಿದೆ. ಯಾವ ನೈತಿಕತೆ ಇಟ್ಟುಕೊಂಡು ಇವರು ಹೋರಾಟ ಮಾಡುತ್ತಾರೆ? ಎಂದು ಪ್ರಶ್ನೆ ಮಾಡಿದರು.

ಕಾಂಗ್ರೆಸ್ ಸರಕಾರ, ದಿಲ್ಲಿ ಹೈಕಮಾಂಡ್ ಗೆ ಎಟಿಎಂ ಆಗಿದೆ‌. ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಆರೋಪ ಬಂದಾಗ, ಎಲ್.ಕೆ.ಅಡ್ವಾಣಿ ಮೇಲೆ ಆರೋಪ ಬಂದಾಗ ರಾಜೀನಾಮೆ ಪಡೆಯಲಾಗಿತ್ತು. ಆದರೆ ಈ ಪರಂಪರೆ ಕಾಂಗ್ರೆಸ್ ಗಿಲ್ಲ. ಕಾಂಗ್ರೆಸ್ ನಾಯಕರು ಜಾಮೀನಿನ ಮೇಲೆ ಹೊರಗಿದ್ದಾರೆ. ಅವರ ಅಜೆಂಡಾವೇ ಭ್ರಷ್ಟಾಚಾರ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News