ರಾಜ್ಯದಲ್ಲಿ ಒಂದೇ ದಿನ 159 ಮಂದಿಗೆ ಡೆಂಗ್ಯೂ ದೃಢ ; 35 ಮಂದಿ ಆಸ್ಪತ್ರೆಗೆ ದಾಖಲು

Update: 2024-07-07 15:36 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ರಾಜ್ಯಾದ್ಯಂತ 159 ಡೆಂಗ್ಯೂ ಪ್ರಕರಣಗಳು ರವಿವಾರದಂದು ಪತ್ತೆಯಾಗಿದ್ದು, ಒಂದೇ ದಿನ 35 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ 954 ಜನರಿಗೆ ಪರೀಕ್ಷೆ ಮಾಡಲಾಯಿತು. ಆ ಪೈಕಿ 0-1 ವರ್ಷದ ಮೂವರು 1-18 ವರ್ಷದ 48 ಮಕ್ಕಳಲ್ಲಿ ಮತ್ತು 18 ವರ್ಷಕ್ಕಿಂತ ಮೇಲ್ಪಟ್ಟ 108 ಮಂದಿಗೆ ಡೆಂಗಿ ಜ್ವರ ಕಾಣಿಸಿಕೊಂಡಿದೆ.

ರವಿವಾರ ಒಂದೇ ದಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 191 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 80 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 20 ಮಂದಿ ಆಸ್ಪತ್ರೆಗೆ ಸೇರಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ 48 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 8 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಮಕೂರಿನಲ್ಲಿ 121 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 12 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಸೇರಿದ್ದಾರೆ.

ದಾವಣಗೆರೆಯಲ್ಲಿ 56 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 10 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗದಗದಲ್ಲಿ 29 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 5 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾದಗಿರಿಯಲ್ಲಿ 110 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಇಬ್ಬರಿಗೆ ಡೆಂಗ್ಯೂ ದೃಢಪಟ್ಟಿದೆ.

ಬೀದರ್ ನಲ್ಲಿ 112 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 13 ಜನರಿಗೆ ಡೆಂಗಿ ದೃಢಪಟ್ಟಿದೆ. ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಪ್ಪಳದಲ್ಲಿ 86 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಒಬ್ಬರಿಗೆ ಡೆಂಗ್ಯೂ ದೃಢಪಟ್ಟಿದೆ. ಹಾಸನದಲ್ಲಿ 48 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಮೂವರಿಗೆ‌ ಡೆಂಗ್ಯೂ ದೃಢಪಟ್ಟಿದೆ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ 153 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 25 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ರಾಜ್ಯದಲ್ಲಿ ಜನವರಿಯಿಂದ ಇಲ್ಲಿಯವರೆಗೆ 54,820 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 7165 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 301 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಆರು ಮಂದಿ ಡೆಂಗ್ಯೂ ರೋಗಕ್ಕೆ ಬಲಿಯಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News