ರಾಜ್ಯಾದ್ಯಂತ 293 ಮಂದಿಗೆ ಡೆಂಗ್ಯೂ ದೃಢ, 100 ಮಂದಿ ಆಸ್ಪತ್ರೆಗೆ ದಾಖಲು
ಬೆಂಗಳೂರು: ರಾಜ್ಯಾದ್ಯಂತ 293 ಡೆಂಗಿ ಪ್ರಕರಣಗಳು ಬುಧವಾರದಂದು ಪತ್ತೆಯಾಗಿದ್ದು, ಒಂದೇ ದಿನ 100 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ 1,874 ಜನರಿಗೆ ಪರೀಕ್ಷೆ ಮಾಡಲಾಯಿತು. ಆ ಪೈಕಿ 0- 1 ವರ್ಷದ ಇಬ್ಬರು, 1-18 ವರ್ಷದ 101 ಮಕ್ಕಳಲ್ಲಿ ಮತ್ತು 18 ವರ್ಷಕ್ಕಿಂತ ಮೇಲ್ಪಟ್ಟ 193 ಮಂದಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ.
ಬುಧವಾರ ಒಂದೇ ದಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 391 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 118 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 9 ಮಂದಿ ಆಸ್ಪತ್ರೆಗೆ ಸೇರಿದ್ದಾರೆ. ಬಿಬಿಎಂಪಿ ಹೊರತುಪಡಿಸಿ ಬೆಂಗಳೂರು ನಗರದಲ್ಲಿ 7 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 7 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 4 ಮಂದಿ ಆಸ್ಪತ್ರೆಗೆ ಸೇರಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ 45 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 2 ಜನರಿಗೆ ಡೆಂಗ್ಯೂ ದೃಢಪಟ್ಟಿದೆ.
ಕೋಲಾರದಲ್ಲಿ 50 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 14 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 8 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಮಕೂರಿನಲ್ಲಿ 50 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 8 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 8 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸೇರಿದ್ದಾರೆ. ದಾವಣಗೆರೆಯಲ್ಲಿ 99 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 10 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 7 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಗಲಕೋಟೆಯಲ್ಲಿ 27 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 4 ಜನರಿಗೆ ಡೆಂಗ್ಯೂ ದೃಢಪಟ್ಟಿದೆ.
ಧಾರವಾಡದಲ್ಲಿ 36 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 15 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 15 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾವೇರಿಯಲ್ಲಿ 103 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 15 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಉತ್ತರ ಕನ್ನಡದಲ್ಲಿ 14 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಮೂವರಿ ಡೆಂಗ್ಯೂ ದೃಢಪಟ್ಟಿದೆ. ಒಬ್ಬರು ಆಸ್ಪತ್ರೆಗೆ ಸೇರಿದ್ದಾರೆ.
ಕಲಬುರಗಿಯಲ್ಲಿ 72 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 8 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 4 ಮಂದಿ ಆಸ್ಪತ್ರೆಗೆ ಸೇರಿದ್ದಾರೆ. ಯಾದಗಿರಿಯಲ್ಲಿ 64 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 4 ಮಂದಿಗೆ ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಬೀದರ್ ನಲ್ಲಿ 84 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 6 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಬಳ್ಳಾರಿಯಲ್ಲಿ 102 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಮೂವರಿಗೆ ಡೆಂಗ್ಯೂ ದೃಢಪಟ್ಟಿದೆ. ಒಬ್ಬರು ಆಸ್ಪತ್ರೆಗೆ ಸೇರಿದ್ದಾರೆ. ವಿಜಯನಗರದಲ್ಲಿ 225 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 10 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಇಬ್ಬರು ಆಸ್ಪತ್ರೆಗೆ ಸೇರಿದ್ದಾರೆ.
ಕೊಪ್ಪಳದಲ್ಲಿ 40 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಮೂವರು ಡೆಂಗ್ಯೂ ದೃಢಪಟ್ಟಿದೆ. ಚಾಮರಾಜನಗರದಲ್ಲಿ 40 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಮೂವರಿಗೆ ಡೆಂಗ್ಯೂ ದೃಢಪಟ್ಟಿದೆ. ಒಬ್ಬರು ಆಸ್ಪತ್ರೆಗೆ ಸೇರಿದ್ದಾರೆ. ಮಂಡ್ಯದಲ್ಲಿ 34 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 30 ಮಂದಿಗೆ ಡೆಂಗಿ ದೃಢಪಟ್ಟಿದೆ. 10 ಮಂದಿ ಆಸ್ಪತ್ರೆಗೆ ಸೇರಿದ್ದಾರೆ.
ಉಡುಪಿಯಲ್ಲಿ 123 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 6 ಮಂದಿಗೆ ಡೆಂಗ್ಯೂ ದೃಢಪಟ್ಟಿದೆ. 6 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ 150 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 5 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಡುಗಿನಲ್ಲಿ 73 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 12 ಮಂದಿಗೆ ಡೆಂಗ್ಯೂ ದೃಢಪಟ್ಟಿದೆ. 8 ಮಂದಿ ಆಸ್ಪತ್ರೆಗೆ ಸೇರಿದ್ದಾರೆ.
ಇನ್ನು ರಾಜ್ಯದಲ್ಲಿ ಜನವರಿಯಿಂದ ಇಲ್ಲಿಯವರೆಗೆ 58,534 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 7840 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 358 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಏಳು ಮಂದಿ ಡೆಂಗ್ಯೂ ರೋಗಕ್ಕೆ ಬಲಿಯಾಗಿದ್ದಾರೆ.