ರಾಜ್ಯಾದ್ಯಂತ 424 ಮಂದಿಗೆ ಡೆಂಗ್ಯೂ ದೃಢ, 119 ಮಂದಿ ಆಸ್ಪತ್ರೆಗೆ ದಾಖಲು

Update: 2024-07-13 16:14 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ರಾಜ್ಯದಲ್ಲಿ ನಿತ್ಯ ಡೆಂಗ್ಯೂ ಜ್ವರ ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿದ್ದು, ಬರೋಬ್ಬರಿ 10 ಸಾವಿರ ಮಂದಿಗೆ ಡೆಂಗಿ ಜ್ವರ ಹರಡುವ ಸಾಧ್ಯತೆ ದಟ್ಟವಾಗಿದೆ. ಅದರಲ್ಲೂ ಕಳೆದ 24 ಗಂಟೆಗಳಲ್ಲಿ ಮತ್ತೆ 424 ಮಂದಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ.

ಒಂದೇ ದಿನ 119 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ 2557 ಜನರಿಗೆ ಪರೀಕ್ಷೆ ಮಾಡಲಾಯಿತು. ಆ ಪೈಕಿ 0-1 ವರ್ಷದ 4, 1-18 ವರ್ಷದ 168 ಮಕ್ಕಳಲ್ಲಿ ಮತ್ತು 18 ವರ್ಷಕ್ಕಿಂತ ಮೇಲ್ಪಟ್ಟ 252 ಮಂದಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ.

ರಾಜ್ಯದಲ್ಲಿ ಜನವರಿಯಿಂದ ಇಲ್ಲಿಯವರೆಗೆ 66,298 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 9082 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 353 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಏಳು ಮಂದಿ ಡೆಂಗ್ಯೂ ರೋಗಕ್ಕೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News