ರಾಜ್ಯಾದ್ಯಂತ 478 ಮಂದಿಗೆ ಡೆಂಗ್ಯೂ ದೃಢ, 173 ಮಂದಿ ಆಸ್ಪತ್ರೆಗೆ ದಾಖಲು

Update: 2024-07-18 17:21 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ರಾಜ್ಯಾದ್ಯಂತ 478 ಡೆಂಗ್ಯೂ ಪ್ರಕರಣಗಳು ರವಿವಾರದಂದು ಪತ್ತೆಯಾಗಿದ್ದು, ಒಂದೇ ದಿನ 173 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ 4050 ಜನರಿಗೆ ಪರೀಕ್ಷೆ ಮಾಡಲಾಯಿತು. ಆ ಪೈಕಿ 0-1 ವರ್ಷದ 11, 1-18 ವರ್ಷದ 135 ಮಕ್ಕಳಲ್ಲಿ ಮತ್ತು 18 ವರ್ಷಕ್ಕಿಂತ ಮೇಲ್ಪಟ್ಟ 332 ಮಂದಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ.

ರವಿವಾರ ಒಂದೇ ದಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 2110 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 265 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 61 ಮಂದಿ ಆಸ್ಪತ್ರೆಗೆ ಸೇರಿದ್ದಾರೆ. ರಾಮನಗರದಲ್ಲಿ 52 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 7 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಇಬ್ಬರು ಆಸ್ಪತ್ರೆಗೆ ಸೇರಿದ್ದಾರೆ. ತುಮಕೂರಿನಲ್ಲಿ 58 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 12 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಎಂಟು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸೇರಿದ್ದಾರೆ.

ಚಿತ್ರದುರ್ಗದಲ್ಲಿ 681 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 22 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 7 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾವಣಗೆರೆಯಲ್ಲಿ 30 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 26 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 9 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಧಾರವಾಡದಲ್ಲಿ 87 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 18 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 11 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗದಗದಲ್ಲಿ 48 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 9 ಜನರಿಗೆ ಡೆಂಗ್ಯೂದೃಢಪಟ್ಟಿದೆ. 5 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಳ್ಳಾರಿಯಲ್ಲಿ 10 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಇಬ್ಬರಿಗೆ ಡೆಂಗ್ಯೂ ದೃಢಪಟ್ಟಿದೆ. 9 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸೇರಿದ್ದಾರೆ.

ದಕ್ಷಿಣ ಕನ್ನಡದಲ್ಲಿ 58 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 6 ಮಂದಿಗೆ ಡೆಂಗ್ಯೂ ದೃಢಪಟ್ಟಿದೆ. ಉಡುಪಿಯಲ್ಲಿ 11 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 8 ಮಂದಿಗೆ ಡೆಂಗ್ಯೂದೃಢಪಟ್ಟಿದೆ. 16 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ 104 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 3 ಜನರಿಗೆ ಡೆಂಗ್ಯೂ ದೃಢಪಟ್ಟಿದೆ.

ಇನ್ನು ರಾಜ್ಯದಲ್ಲಿ ಜನವರಿಯಿಂದ ಇಲ್ಲಿಯವರೆಗೆ 85,270 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 11,451 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 620 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಎಂಟು ಮಂದಿ ಡೆಂಗ್ಯೂ ರೋಗಕ್ಕೆ ಬಲಿಯಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News