ರಾಜ್ಯದಲ್ಲಿ ಒಂದೇ ದಿನ 320 ಮಂದಿಗೆ ಡೆಂಗಿ ದೃಢ, 96 ಮಂದಿ ಆಸ್ಪತ್ರೆಗೆ ದಾಖಲು

Update: 2024-07-28 16:06 GMT

ಬೆಂಗಳೂರು : ರಾಜ್ಯಾದ್ಯಂತ 320 ಡೆಂಗಿ ಪ್ರಕರಣಗಳು ರವಿವಾರದಂದು ಪತ್ತೆಯಾಗಿದ್ದು, ಒಂದೇ ದಿನ 96 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ 1630 ಜನರಿಗೆ ಪರೀಕ್ಷೆ ಮಾಡಲಾಯಿತು. ಆ ಪೈಕಿ 0-1 ವರ್ಷದ 5, 1-18 ವರ್ಷದ 112 ಮಕ್ಕಳಲ್ಲಿ ಮತ್ತು 18 ವರ್ಷಕ್ಕಿಂತ ಮೇಲ್ಪಟ್ಟ 203 ಮಂದಿಗೆ ಡೆಂಗಿ ಜ್ವರ ಕಾಣಿಸಿಕೊಂಡಿದೆ.

ರವಿವಾರ ಒಂದೇ ದಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 770 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 135 ಜನರಿಗೆ ಡೆಂಗಿ ದೃಢಪಟ್ಟಿದೆ. 28 ಮಂದಿ ಆಸ್ಪತ್ರೆಗೆ ಸೇರಿದ್ದಾರೆ. ಬಿಬಿಎಂಪಿ ಹೊರತುಪಡಿಸಿ ನಗರದಲ್ಲಿ 17 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 7 ಜನರಿಗೆ ಡೆಂಗಿ ದೃಢಪಟ್ಟಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 13 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಮೂವರಿಗೆ ಡೆಂಗಿ ದೃಢಪಟ್ಟಿದೆ. ಒಬ್ಬರು ಆಸ್ಪತ್ರೆಗೆ ಸೇರಿದ್ದಾರೆ.

ರಾಮನಗರದಲ್ಲಿ 130 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 15 ಜನರಿಗೆ ಡೆಂಗಿ ದೃಢಪಟ್ಟಿದೆ. ಇಬ್ಬರು ಆಸ್ಪತ್ರೆಗೆ ಸೇರಿದ್ದಾರೆ. ಕೋಲಾರದಲ್ಲಿ 11 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಒಬ್ಬರಿಗೆ ಡೆಂಗಿ ದೃಢಪಟ್ಟಿದೆ. ಇಬ್ಬರು ಆಸ್ಪತ್ರೆಗೆ ಸೇರಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ 20 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 5 ಮಂದಿಗೆ ಡೆಂಗಿ ದೃಢಪಟ್ಟಿದೆ. 5 ಮಂದಿ ಆಸ್ಪತ್ರೆಗೆ ಸೇರಿದ್ದಾರೆ.

ತುಮಕೂರಿನಲ್ಲಿ 26 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 9 ಜನರಿಗೆ ಡೆಂಗಿ ದೃಢಪಟ್ಟಿದೆ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಸೇರಿದ್ದಾರೆ. ಚಿತ್ರದುರ್ಗದಲ್ಲಿ 12 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 4 ಜನರಿಗೆ ಡೆಂಗಿ ದೃಢಪಟ್ಟಿದೆ. 5 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾವಣಗೆರೆಯಲ್ಲಿ 35 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 17 ಜನರಿಗೆ ಡೆಂಗಿ ದೃಢಪಟ್ಟಿದೆ. ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳಗಾವಿಯಲ್ಲಿ 49 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 21 ಮಂದಿಗೆ ಡೆಂಗಿ ದೃಢಪಟ್ಟಿದೆ. ವಿಜಯಪುರದಲ್ಲಿ 66 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಮೂವರಿಗೆ ಡೆಂಗಿ ದೃಢಪಟ್ಟಿದೆ. ಬಾಗಲಕೋಟೆಯಲ್ಲಿ 13 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಮೂವರಿಗೆ ಡೆಂಗಿ ದೃಢಪಟ್ಟಿದೆ. ಧಾರವಾಡದಲ್ಲಿ 15 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಇಬ್ಬರಿಗೆ ಡೆಂಗಿ ದೃಢಪಟ್ಟಿದೆ.

ಗದಗದಲ್ಲಿ 10 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಒಬ್ಬರಿಗೆ ಡೆಂಗಿ ದೃಢಪಟ್ಟಿದೆ. ಹಾವೇರಿಯಲ್ಲಿ 29 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 17 ಮಂದಿಗೆ ಡೆಂಗಿ ದೃಢಪಟ್ಟಿದೆ. ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತರ ಕನ್ನಡದಲ್ಲಿ 9 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಒಬ್ಬರಿಗೆ ಡೆಂಗಿ ದೃಢಪಟ್ಟಿದೆ.

ಕಲಬುರಗಿದಲ್ಲಿ 36 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 13 ಜನರಿಗೆ ಡೆಂಗಿ ದೃಢಪಟ್ಟಿದೆ. 4 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾದಗಿರಿಲ್ಲಿ 14 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಇಬ್ಬರಿಗೆ ಡೆಂಗಿ ದೃಢಪಟ್ಟಿದೆ. ಬೀದರ್ ನಲ್ಲಿ 14 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಇಬ್ಬರಿಗೆ ಡೆಂಗಿ ದೃಢಪಟ್ಟಿದೆ. ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಳ್ಳಾರಿಯಲ್ಲಿ 38 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 4 ಮಂದಿಗೆ ಡೆಂಗಿ ದೃಢಪಟ್ಟಿದೆ. 6 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸೇರಿದ್ದಾರೆ. ವಿಜಯನಗರದಲ್ಲಿ 25 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 4 ಮಂದಿಗೆ ಡೆಂಗಿ ದೃಢಪಟ್ಟಿದೆ. 6 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಯಚೂರಿನಲ್ಲಿ 15 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಇಬ್ಬರಿಗೆ ಡೆಂಗಿ ದೃಢಪಟ್ಟಿದೆ. ಕೊಪ್ಪಳದಲ್ಲಿ 31 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಒಬ್ಬರಿಗೆ ಡೆಂಗಿ ದೃಢಪಟ್ಟಿದೆ.

ಮೈಸೂರಿನಲ್ಲಿ 24 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 4 ಮಂದಿಗೆ ಡೆಂಗಿ ದೃಢಪಟ್ಟಿದೆ. 7 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಮರಾಜನಗದಲ್ಲಿ 30 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಮೂವರಿಗೆ ಡೆಂಗಿ ದೃಢಪಟ್ಟಿದೆ. ಮಂಡ್ಯದಲ್ಲಿ 32 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 6 ಮಂದಿಗೆ ಡೆಂಗಿ ದೃಢಪಟ್ಟಿದೆ. 4 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಸನದಲ್ಲಿ 11 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 4 ಮಂದಿಗೆ ಡೆಂಗಿ ದೃಢಪಟ್ಟಿದೆ.

ದಕ್ಷಿಣ ಕನ್ನಡದಲ್ಲಿ 35 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 7 ಮಂದಿಗೆ ಡೆಂಗಿ ದೃಢಪಟ್ಟಿದೆ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿಯಲ್ಲಿ 15 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಮೂವರಿಗೆ ಡೆಂಗಿ ದೃಢಪಟ್ಟಿದೆ. ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ 27 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಒಬ್ಬರಿಗೆ ಡೆಂಗಿ ದೃಢಪಟ್ಟಿದೆ. ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಡಗುನಲ್ಲಿ 8 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಒಬ್ಬರಿಗೆ ಡೆಂಗಿ ದೃಢಪಟ್ಟಿದೆ.

ಇನ್ನು ರಾಜ್ಯದಲ್ಲಿ ಜನವರಿಯಿಂದ ಇಲ್ಲಿಯವರೆಗೆ 1,17,890 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 17,227 ಜನರಿಗೆ ಡೆಂಗಿ ದೃಢಪಟ್ಟಿದೆ. 465 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಹತ್ತು ಮಂದಿ ಡೆಂಗಿ ರೋಗಕ್ಕೆ ಬಲಿಯಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News