ಡೆಂಗಿ ಜ್ವರ: ಪೊಲೀಸ್ ಕಾನ್ಸ್‌ಟೇಬಲ್‌ ಮೃತ್ಯು

Update: 2023-07-12 12:19 GMT

ಮೃತ ಪೊಲೀಸ್ ಕಾನ್ಸ್ ಟೇಬಲ್

ಬೆಂಗಳೂರು, ಜು.12: ಡೆಂಗಿ ಜ್ವರದಿಂದ ಬಳಲುತ್ತಿದ್ದ ಬೆಂಗಳೂರು ನಗರ ಪೊಲೀಸ್ ಇಲಾಖೆಯ ಕಾನ್ಸ್‌ಟೇಬಲ್‌ ಒಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದು ಬುಧವಾರ ವರದಿಯಾಗಿದೆ. 

ಮರತರನ್ನು ಬೆಂಗಳೂರು ಪೊಲೀಸ್ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪವನ್ ಕುಮಾರ್ (30) ಎಂದು ಗುರುತಿಸಲಾಗಿದೆ. 

2018ರ ಬ್ಯಾಚಿನ ಕಾನ್ಸ್‌ಟೇಬಲ್‌ ಆಗಿದ್ದ ಪವನ್ ಕುಮಾರ್ ಕಲಾಸಿಪಾಳ್ಯ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಳಿಕ ಬೆಂಗಳೂರು ಪೊಲೀಸ್ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಕೆಲ ದಿನದಿಂದ ಡೆಂಗಿ ಜ್ವರದಿಂದ ಬಳಲುತ್ತಿದ್ದ ಪವನ್ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು (ಬುಧವಾರ) ಮೃತಪಟ್ಟಿದ್ದಾರೆ.

ಪವನ್ ಅಕಾಲಿಕ ಸಾವಿಗೆ ಇಲಾಖೆಯ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News