ಕನಕಪುರದ ಕರ್ನಾಟಕ ಒನ್ ಸೇವಾ ಕೇಂದ್ರಕ್ಕೆ ಡಿಸಿಎಂ ದಿಢೀರ್ ಭೇಟಿ; ಗೃಹಲಕ್ಷಿ ನೋಂದಣಿ ಪ್ರಕ್ರಿಯೆ ಪರಿಶೀಲನೆ

Update: 2023-07-22 08:47 GMT

ರಾಮನಗರ: ಜಿಲ್ಲೆಯ ಕನಕಪುರದ ಎಸ್ ಎಲ್ ಎನ್ ರಸ್ತೆಯ ಕರ್ನಾಟಕ ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ದಿಢೀರ್ ಭೇಟಿ ಕೊಟ್ಟು ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆಯನ್ನು ಖುದ್ದು ಪರಿಶೀಲಿಸಿದರು.

ಡಿಸಿಎಂ ಅವರ ದಿಢೀರ್ ಭೇಟಿಯಿಂದ ಅಲ್ಲಿನ ಸಿಬ್ಬಂದಿ ಒಂದು ಕ್ಷಣ ಅವಕ್ಕಾಗಿದ್ದಾರೆ. ಹೆಸರು ನೋಂದಣಿ ಮಾಡಲು ಬಂದಿದ್ದ ಮಹಿಳೆಯರು ಕೂಡ ಸೇವಾ ಕೇಂದ್ರದಲ್ಲಿ ಡಿಸಿಎಂ ಅವರನ್ನು ಕಂಡು ಆಶ್ಚರ್ಯಚಕಿತರಾದರು.

ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆಯನ್ನು ಹೇಗೆ ಮಾಡಲಾಗುತ್ತಿದೆ? ಅಲ್ಲಿನ ಸಿಬ್ಬಂದಿ ಏನಾದರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರಾ? ವಿಳಂಬ ಮಾಡುತ್ತಿದ್ದಾರಾ? ಕುಂಟು ನೆಪ ಹೇಳುತ್ತಿದ್ದಾರಾ? ಮನೆ ಯಜಮಾನಿಯರಿಗೆ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ಇದೆಯಾ? ನೋಂದಣಿ ಪ್ರಕ್ರಿಯೆ ಸರಳವಾಗಿದೆಯಾ ಎಂಬುದರ ಬಗ್ಗೆ ನೋಂದಣಿದಾರರಿಂದಲೇ ಡಿಸಿಎಂ ಖುದ್ದು ಮಾಹಿತಿ ಪಡೆದರು.

ಅಗತ್ಯ ದಾಖಲೆ ಸಲ್ಲಿಸಲು ತನಗಿರುವ ವೈಯಕ್ತಿಕ ತಾಂತ್ರಿಕ ತೊಡಕು ಬಗ್ಗೆ ಮಹಿಳೆಯೊಬ್ಬರು ನೀವೇದಿಸಿಕೊಂಡಾಗ ಅದಕ್ಕೆ ಪರಿಹಾರವನ್ನು ಡಿಸಿಎಂ ಅವರು ಸೂಚಿಸಿದರು.

ಸಿಬ್ಬಂದಿ ಜತೆ ಕಂಪ್ಯೂಟರ್ ಮುಂದೆ ಕುಳಿತು ಪ್ರಕ್ರಿಯೆಯನ್ನು ಖುದ್ದು ಪರಿಶೀಲಿಸಿದ ಡಿಸಿಎಂ, ಕೆಲವು ಮಹಿಳೆಯರಿಗೆ ನೋಂದಣಿ ಪತ್ರವನ್ನೂ ವಿತರಿಸಿದರು.

 

 

 

 

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News