27 ಮಂದಿ ಇಂಜಿನಿಯರ್ ಗಳ ಅಮಾನತು: ಗ್ರಾಮೀಣಾಭಿವೃದ್ಧಿ ಇಲಾಖೆ ಆದೇಶ

Update: 2023-10-26 14:31 GMT

ಬೆಂಗಳೂರು, ಅ.26: ವರ್ಗಾಯಿಸಿದ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪವೆಸಗಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 27 ಮಂದಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಳು, ಸಹಾಯಕ ಇಂಜಿನಿಯರ್ ಗಳು ಹಾಗೂ ಜೂನಿಯರ್ ಇಂಜಿನಿಯರ್ ಗಳನ್ನು ಸೇವೆಯಿಂದ ಅಮಾನತು ಪಡಿಸಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಿದೆ.

ನಾಗರಿಕ ಸೇವಾ ನಿಯಮಗಳು 1957ರ ನಿಯಮ 10(1) (ಡಿ) ಅಡಿ ಪ್ರದತ್ತವಾದ ಅಧಿಕಾರದನ್ವಯ ಈ ಎಲ್ಲ ಅಧಿಕಾರಿಗಳನ್ನು ಇಲಾಖಾ ತನಿಖೆ ಕಾದಿರಿಸಿ ಮುಂದಿನ ಆದೇಶದವರೆಗೆ ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ. ಅಮಾನತುಗೊಂಡಿರುವ ಅಧಿಕಾರಿಗಳನ್ನು ತಕ್ಷಣವೇ ಹುದ್ದೆಯಿಂದ ಬಿಡುಗಡೆಗೊಳಿಸಲು ಸೂಚಿಸಲಾಗಿದೆ.

ಅಮಾನತುಗೊಂಡ ಅಧಿಕಾರಿಗಳಲ್ಲಿ 5 ಮಂದಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಳು (ಎಇಇ), 7 ಮಂದಿ ಸಹಾಯಕ ಎಂಜನಿಯರ್‍ಗಳು (ಎಇ) ಹಾಗೂ 15 ಮಂದಿ ಜೂನಿಯರ್ ಇಂಜಿನಿಯರ್‌ಗಳು (ಜೆಇ) ಸೇರಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News