ಆಂಜನೇಯ ಜನ್ಮಸ್ಥಳ ಅಭಿವೃದ್ಧಿ ನಮ್ಮ ಮುಂದಿನ ಗುರಿ: ಬಸವರಾಜ ಬೊಮ್ಮಾಯಿ

Update: 2024-01-22 13:01 GMT

ಬೆಂಗಳೂರು: ‘ರಾಮಜನ್ಮ ಭೂಮಿ ಹೋರಾಟದಲ್ಲಿ ಕರ್ನಾಟಕದ ಪಾತ್ರ ದೊಡ್ಡದಿದೆ. ರಾಮನಿಗೂ ಕರ್ನಾಟಕಕ್ಕೂ ದೊಡ್ಡ ನಂಟಿದೆ. ಆಂಜನೇಯ ಜನ್ಮಭೂಮಿ ಅಭಿವೃದ್ಧಿ ಪಡಿಸುವುದು ನಮ್ಮ ಮುಂದಿನ ಗುರಿ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸೋಮವಾರ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪ ಪನೆ ಆಗುತ್ತಿರುವ ಹಿನ್ನೆಲೆಯಲ್ಲಿ ಬಾಲಬ್ರೂಹಿ ಅತಿಥಿ ಗೃಹದ ಬಳಿ ಇರುವ ಮಾರುತಿ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ಮಾತನಾಡಿದ ಅವರು, ಇಂದು ಭಾರತದ ಇತಿಹಾಸದಲ್ಲಿ ಮಹತ್ವದ ಭಕ್ತಿ ಭಾವದ ದಿನ, ಐತಿಹಾಸಿಕ ದಿನ. ಪರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ದಿನ ಎಂದರು.

ಒಂದು ದೇಶದ ಪ್ರಜಾಪ್ರಭುತ್ವದಲ್ಲಿ ಅಂತಿಮ ನಿರ್ಣಯ ಜನರ ನಿರ್ಣಯ. ಎಲ್ಲಕ್ಕಿಂತ ದೊಡ್ಡ ಕೆಲಸ ಸರಕಾರ ಮಾಡಬೇಕಾಗಿರುವುದು ಜನರ ಕೆಲಸ. ಈ ಕೆಲಸ ಪ್ರಧಾನಿ ಮೋದಿ ಅವರಿಂದ ಆಗುತ್ತಿದೆ. ಶ್ರದ್ದಾ ಭಕ್ತಿಯಿಂದ ಅಯೋಧ್ಯೆಯಲ್ಲಿ ರಾಮನ ಪ್ರಾಣ ಪ್ರತಿಷ್ಠಾನೆ ಆಗುತ್ತಿದೆ. ಮಂದಿರಕ್ಕಾಗಿ ಹೋರಾಟ ಮಾಡಿದಂತ ಎಲ್ಲ ಮಹನೀಯರಿಗೆ ನಮನ ಸಲ್ಲಿಸುವೆ ಎಂದು ತಿಳಿಸಿದರು.

ರಾಮಜನ್ಮಭೂಮಿ ಹೋರಾಟದಲ್ಲಿ ಕರ್ನಾಟಕದ ದೊಡ್ಡ ಪಾತ್ರವಿದೆ. ರಾಮನಿಗೂ ಕರ್ನಾಟಕಕ್ಕೂ ನಂಟಿದೆ. ಆಂಜನೇಯ ಜನ್ಮಸ್ಥಳ ಆಂಜನಾದ್ರಿ ಕರ್ನಾಟಕದಲ್ಲೇ ಇದೆ. ಆಂಜನೇಯ ಇದ್ದರೆ ರಾಮ ಪರಿಪೂರ್ಣ. ಮುಂದಿನ ನಮ್ಮ ಗುರಿ ಆಂಜನೇಯ ಜನ್ಮ ಭೂಮಿ ಅಭಿವೃದ್ಧಿ ಮಾಡುವುದು ಮುಂದಿನ ದಿನಗಳಲ್ಲಿ ಆಂಜನೇಯ ಕ್ಷೇತ್ರ ಅಭಿವೃದ್ಧಿ ಮಾಡಬೇಕೆಂದು ಒತ್ತಾಯಿಸುತ್ತೇನೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News