ನಕಲಿ ಔಷಧಿ ನಿಯಂತ್ರಣಕ್ಕೆ ಕ್ರಮ: ದಿನೇಶ್ ಗುಂಡೂರಾವ್

Update: 2025-03-17 21:07 IST
ನಕಲಿ ಔಷಧಿ ನಿಯಂತ್ರಣಕ್ಕೆ ಕ್ರಮ: ದಿನೇಶ್ ಗುಂಡೂರಾವ್
  • whatsapp icon

ಬೆಂಗಳೂರು : ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಮಾಡುವ ಕಂಪೆನಿಗಳ ವಿರುದ್ಧ ಅಗತ್ಯ ಕ್ರಮ ಜರುಗಿಸಿ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಸೋಮವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಎಸ್.ರವಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದಿನ 3 ವರ್ಷಗಳಲ್ಲಿ ನಕಲಿ ಔಷಧ ಮಾರಾಟಗಾರರನ್ನು ಪತ್ತೆ ಹಚ್ಚಿ ಕಲಂ 17 ಬಿ, (ಬಿ), (ಸಿ), (ಡಿ) ಮತ್ತು ಮತ್ತು (ಇ)ರ ಔಷಧ ಮತ್ತು ಕಾಂತಿ ವರ್ಧಕ ಅಧಿನಿಯಮ 1940 ಮತ್ತು ನಿಯಮಗಳಡಿಯಲ್ಲಿ ಸೂಕ್ತ ಕ್ರಮಕೈಗೊಂಡು ವಿವಿಧ ನ್ಯಾಯಾಲಯಗಳಲ್ಲಿ ಮೊಕದ್ದಮೆ ದಾಖಲಿಸಲಾಗಿದೆ ಎಂದರು.

ಹಿಂದಿನ 3 ವರ್ಷಗಳಲ್ಲಿ ಒಟ್ಟು 20 ನಕಲಿ ಔಷಧ ತಯಾರಿಕಾ ಕಂಪೆನಿ ಮತ್ತು 1 ಔಷಧ ಮಾರಾಟಗಾರರ ಪ್ರಕರಣಗಳನ್ನು ಪತ್ತೆ ಮಾಡಿ ಮೊಕದ್ದಮೆ ಹೂಡಲಾಗಿದೆ. 2022-23ನೇ ಸಾಲಿನಲ್ಲಿ ಒಟ್ಟು 6, 2023-24ನೇ ಸಾಲಿನಲ್ಲಿ ಒಟ್ಟು 10 ನಕಲಿ ಔಷಧ ತಯಾರಕರು ಮತ್ತು 2024-25ನೇ ಸಾಲಿನಲ್ಲಿ 4 ನಕಲಿ ಔಷಧ ತಯಾರಕರ ಮತ್ತು 1 ನಕಲಿ ಔಷಧ ಮಾರಾಟಗಾರರ ವಿರುದ್ಧ ವಿವಿಧ ನ್ಯಾಯಾಲಯಗಳಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗಿದೆ. ಕಾನೂನು ಕ್ರಮಗಳನ್ನು ಸಹ ಜರುಗಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ವಿವರಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News