ಭವಿಷ್ಯವಿಲ್ಲವೆಂದು ಬಿಜೆಪಿ-ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರುತ್ತಿದ್ದಾರೆ: ಡಿ.ಕೆ.ಶಿವಕುಮಾರ್

Update: 2024-10-31 13:41 GMT

ಬೆಂಗಳೂರು : ‘ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬ ಕಾರಣಕ್ಕೆ ಆ ಪಕ್ಷದ ಮುಖಂಡರು, ಕಾರ್ಯಕರ್ತರು ಗುಂಪು ಗುಂಪಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಚನ್ನಪಟ್ಟಣದ ಜೆಡಿಎಸ್-ಬಿಜೆಪಿ ಮುಖಂಡರು, ಕಾರ್ಯಕರ್ತರು ಪಕ್ಷಕ್ಕೆ ಸೇರಿಸಿಕೊಂಡ ನಂತರ ಮಾತನಾಡಿದ ಅವರು, ‘ಕುಮಾರಸ್ವಾಮಿ ತನ್ನ ಸ್ಥಾನವನ್ನೇ ಉಳಿಸಿಕೊಳ್ಳುವುದು ಕಷ್ಟ. ಬಿಜೆಪಿ ನಾಯಕರೇ ಕುಮಾರಸ್ವಾಮಿಗೆ ಉತ್ತರ ನೀಡುತ್ತಾರೆ. ಅವರ ಪಕ್ಷ ಗಟ್ಟಿಯಾಗಿ ಉಳಿಯುತ್ತದೆಯೋ ಇಲ್ಲವೋ ಎಂಬುದನ್ನು ಸಮಯ ಬಂದಾಗ ಉತ್ತರ ನೀಡುತ್ತೇನೆ. ಬಿಜೆಪಿಯಲ್ಲಿ ಅವರನ್ನು ಯಾವ ರೀತಿ ನಡೆಸಿಕೊಳ್ಳುತ್ತಿದ್ದಾರೆಂದೂ ಗೊತ್ತಿದೆ ಎಂದು ಟೀಕಿಸಿದರು.

‘ಐದು ಬೆರಳು ಸೇರಿ ಕೈ ಮುಷ್ಟಿಯಾಯಿತು, ಐದು ಗ್ಯಾರಂಟಿ ಯೋಜನೆಗಳು ಸೇರಿ ಕೈ(ಕಾಂಗ್ರೆಸ್) ಗಟ್ಟಿಯಾಯಿತು. ಕಾಂಗ್ರೆಸ್ ಪಕ್ಷದಿಂದ ಮಾತ್ರ ರಾಜ್ಯದ ಜನರಿಗೆ ಒಳ್ಳೆಯದಾಗಲು ಸಾಧ್ಯ ಎಂದು ಸಿ.ಪಿ. ಯೋಗೇಶ್ವರ್ ಅವರು, ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂದು ಶಿವಕುಮಾರ್ ನುಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News