ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ರೂ. ಆಮಿಷ ಸತ್ಯ : ಡಿ.ಕೆ.ಶಿವಕುಮಾರ್

Update: 2024-11-14 12:11 GMT

ಡಿ.ಕೆ.ಶಿವಕುಮಾರ್

ಬೆಂಗಳೂರು : ‘ಐವತ್ತು ಮಂದಿ ಕಾಂಗ್ರೆಸ್ ಶಾಸಕರಿಗೆ ಪ್ರತಿಪಕ್ಷ ಬಿಜೆಪಿ 50 ಕೋಟಿ ರೂಪಾಯಿ ಆಮಿಷ ಒಡ್ಡಿರುವುದು ನಿಜ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯರ ಹೇಳಿಕೆಯನ್ನು ಸಮರ್ಥಿಸಿದರು.

ಗುರುವಾರ ವಿಧಾನಸೌಧ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, "ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪಕ್ಷದ ಐವತ್ತು ಶಾಸಕರಿಗೆ ತಲಾ 50 ಕೋಟಿ ರೂ.ನಂತೆ ಬಿಜೆಪಿಯವರು ಆಮಿಷ ಒಡ್ದುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯರ ಹೇಳಿಕೆ ನೀಡಿದ್ದಾರೆ. ಆಪರೇಷನ್ ಕಮಲದ ಬಗ್ಗೆ ನಮ್ಮ ಶಾಸಕರ ಬಳಿ ಮಾತನಾಡಿದ್ದಾರೆ. ಈ ವಿಚಾರವನ್ನು ಕೆಲವರು ಬಂದು ಸಿಎಂ ಬಳಿ ತಿಳಿಸಿದ್ದಾರೆ. ಈ ಸಂಗತಿಯನ್ನು ಸಿಎಂ ಮಾಧ್ಯಮದ ಮುಂದೆ ಹೇಳಿದ್ದಾರೆ" ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News