ಡಿ.ಕೆ.ಸುರೇಶ್ ಸೋಲಿಸಿದ ಕೊಂಡಿಗಳು ಒಂದೊಂದಾಗಿ ಕಳಚಿಕೊಂಡಿವೆ : ಡಿ.ಕೆ.ಶಿವಕುಮಾರ್
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಸೋಲಿಸಿದ ಕೊಂಡಿಗಳು ಒಂದೊಂದೇ ಕಳಚಿಕೊಂಡಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಸೋಮವಾರ ವಿಕಾಸಸೌಧದಲ್ಲಿ ‘ಗೆದ್ದ ಕೂಡಲೇ ಒಕ್ಕಲಿಗ ನಾಯಕನಾಗಲ್ಲ’ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅಶೋಕಣ್ಣ ನನಗಿಂತ ದೊಡ್ಡವನ ಚಿಕ್ಕವನ ಗೊತ್ತಿಲ್ಲ. ಹೌದು, ನನ್ನ ತಮ್ಮ ಸೋತಿದ್ದಾನೆ. ಸೋಲಿಸಿದ ಕೊಂಡಿಗಳು ಒಂದೊಂದೇ ಕಳಚಿಕೊಂಡವೆ ಎಂದು ಹೇಳಿದರು.
ರಾಜರಾಜೇಶ್ವರಿನಗರದಲ್ಲಿ ಏನಾಯಿತು, ಚನ್ನಪಟ್ಟಣದಲ್ಲಿ ಏನಾಯಿತು. ಕನಕಪುರಕ್ಕೆ ಅಶೋಕಣ್ಣ ಬಂದು ನಿಂತಾಗ ಏನಾಯಿತು? ನನಗೆ ಡಿಚ್ಚಿ ಹೊಡೀತ್ತೆನೆಂದು ಬಂದಿದ್ದ ಅಶೋಕಣ್ಣಗೆ ಡೆಪಾಸಿಟ್ ಕೂಡ ಬರಲಿಲ್ಲ ಎಂದು ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದರು.
ಐಎಎಸ್ ಅಧಿಕಾರಿ ಮುಡಾ ಫೈಲ್ ಕೊಂಡೊಯ್ದ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಆ ವಿಚಾರ ನನಗೆ ಗೊತ್ತಿಲ್ಲ. ಅದು ನನ್ನ ಗಮನಕ್ಕೆ ಬಂದಿಲ್ಲ. ಅದು ಹೇಗೆ ತೆಗೆದುಕೊಂಡು ಹೋಗುತ್ತಾರೆ?. ಸರಕಾರಿ ದಾಖಲೆ ಹೇಗೆ ತೆಗೆದುಕೊಂಡು ಹೋಗಲು ಸಾಧ್ಯ?. ಲೋಕಾಯುಕ್ತ ವರದಿ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.