ಕುತೂಹಲ ಮೂಡಿಸಿದ ಡಿ.ಕೆ. ಶಿವಕುಮಾರ್‌ - ಬಿಜೆಪಿ ನಾಯಕಿ ತೇಜಸ್ವಿನಿ ಅನಂತಕುಮಾರ್‌ ಭೇಟಿ

Update: 2023-09-04 09:26 GMT

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ‘ಆಪರೇಷನ್‌ ಹಸ್ತ’ದ ಬಗ್ಗೆ ಬಿರುಸಿನ ಚರ್ಚೆ ನಡೆಯುತ್ತಿರುವುದರ ನಡುವೆಯೇ ಮಾಜಿ ಕೇಂದ್ರ ಸಚಿವ ಅನಂತ ಕುಮಾರ್‌ ರವರ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಅವರು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿದ್ದಾರೆ.

ಡಿಕೆಶಿಯನ್ನು ತೇಜಸ್ವಿನಿ ಅವರು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ದಿವಂಗತ ಅನಂತಕುಮಾರ್‌ ಅವರು ಪ್ರತಿನಿಧಿಸುತ್ತಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಟಿಕೆಟ್‌ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಅವರಿಗೆ ಕೊನೆ ಕ್ಷಣದಲ್ಲಿ ಟಿಕೆಟ್‌ ತಪ್ಪಿ, ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್‌ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ತೇಜಸ್ವಿನಿ ಅವರಿಗೆ ಅಸಮಾಧಾನ ಇತ್ತು ಎಂದು ಹೇಳಲಾಗಿತ್ತು.

ಅದಲ್ಲದೆ, ಅನಂತಕುಮಾರ್‌ ಅವರು ಅಗಲಿದ ಬಳಿಕ ಹಲವು ಸಂದರ್ಭಗಳಲ್ಲಿ ಬಿಜೆಪಿಯನ್ನು ಪರೋಕ್ಷವಾಗಿ ಟೀಕಿಸಿ ತೇಜಸ್ವಿನಿ ಪ್ರತಿಕ್ರಿಯಿಸಿದ್ದರು. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್‌ ಅವರನ್ನು ತೇಜಸ್ವಿನಿ ಅವರು ಭೇಟಿಯಾಗಿರುವುದು ಸಾಕಷ್ಟು ಊಹಾಪೂಹಗಳಿಗೆ ಕಾರಣವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News