ಕಲಾವಿದರು ಯಾರ ಸ್ವತ್ತೂ ಅಲ್ಲ: ಡಿಸಿಎಂ ಡಿಕೆಶಿ ವಿರುದ್ಧ ಆರ್‌.ಅಶೋಕ್​ ಆಕ್ರೋಶ

Update: 2025-03-02 13:12 IST
ಕಲಾವಿದರು ಯಾರ ಸ್ವತ್ತೂ ಅಲ್ಲ: ಡಿಸಿಎಂ ಡಿಕೆಶಿ ವಿರುದ್ಧ ಆರ್‌.ಅಶೋಕ್​ ಆಕ್ರೋಶ

ಆರ್‌.ಅಶೋಕ್‌/ಶಿವಕುಮಾರ್‌ 

  • whatsapp icon

ಬೆಂಗಳೂರು: ಸಮಾಜದಲ್ಲಿ ಎಲ್ಲರೂ ತಮಗೆ ಮತ್ತು ತಮ್ಮ ಪಕ್ಷಕ್ಕೆ ಸೆಲ್ಯೂಟ್ ಹೊಡೆದು, ತಮ್ಮ ಅಡಿಯಾಳುಗಳಂತೆ ನಡೆದುಕೊಳ್ಳಬೇಕು ಎನ್ನುವ ಕೆಟ್ಟ ಮನಸ್ಥಿತಿಯಿಂದ ಡಿ.ಕೆ.ಶಿವಕಮಾರ್ ಹೊರಬರಬೇಕು. ಕಲಾವಿದರು ಯಾರ ಸ್ವತ್ತೂ ಅಲ್ಲ. ಕಲಾವಿದರಿಗೆ ಅವರ ವಿವೇಚನೆಗೆ ತಕ್ಕಂತೆ ನಡೆದುಕೊಳ್ಳುವ, ಯಾರ ಜೊತೆ ಬೇಕಾದರೂ ಗುರುತಿಸಿಕೊಳ್ಳುವ ಅಥವಾ ಗುರುತಿಸಿಕೊಳ್ಳದಿರುವ ಸ್ವಾತಂತ್ರ್ಯವಿದೆ, ಹಕ್ಕಿದೆ ಎಂದು ಆರ್‌.ಅಶೋಕ್‌ ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ಹಂಚಿಕೊಂಡಿರುವ ಅವರು, ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಾಹೇಬರು ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಕಿ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ ನಡೆದುಕೊಳ್ಳುವ ಕಲಾವಿದರಿಗೆ ಮನ್ನಣೆ ಸಿಗುತ್ತದೆ, ಇಲ್ಲವಾದರೆ ಸಿಗುವುದಿಲ್ಲ ಎನ್ನುವ ನಿಮ್ಮ ಮಾತು ನಿಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಟೀಕಿಸಿದ್ದಾರೆ.

ಕಲಾವಿದರು ನಿಮ್ಮ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರಲ್ಲ. ನಿಮ್ಮ ಪಕ್ಷದ ಕಾರ್ಯಕರ್ತರನ್ನು ನಡೆಸಿಕೊಂಡ ರೀತಿ ಕಲಾವಿದರನ್ನು ನಡೆಸಿಕೊಳ್ಳಬೇಡಿ. ಕಲಾವಿದರಿಗೆ ಗೌರವ ಕೊಡುವುದನ್ನು ಕಲಿಯಿರಿ ಎಂದು ಆರ್‌.ಅಶೋಕ್‌ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News