ಎರಡು ವಾರದೊಳಗೆ ಬೆಂಗಳೂರಿನ ರಸ್ತೆಗುಂಡಿ ಮುಚ್ಚಲು ಡಿಸಿಎಂ ನಿರ್ದೇಶನ

Update: 2024-09-01 15:56 GMT

ಬೆಂಗಳೂರು : ಬೃಹತ್ ಬೆಂಗಳೂರುನಗರ ಪಾಲಿಕೆ ವ್ಯಾಪ್ತಿಯ ರಸ್ತೆಗುಂಡಿಗಳನ್ನು ಇನ್ನೂ 15 ದಿನಗಳ ಕಾಲ ಮುಚ್ಚಿ ದುರಸ್ತಿ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.

ರವಿವಾರ ಪ್ರಕಟನೆ ಹೊರಡಿಸಿರುವ ಅವರು, ರಸ್ತೆಗುಂಡಿಗಳ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ತುರ್ತು ಗಮನ ಹರಿಸಬೇಕು. "ರಸ್ತೆ ಗುಂಡಿ ಗಮನ" ಎಂಬ ಆಪ್ ಮೂಲಕ ಸಾರ್ವಜನಿಕರು ರಸ್ತೆಗಳ ಫೋಟೋ ತೆಗೆದು ಅಪ್ ಲೋಡ್ ಮಾಡುವ ವ್ಯವಸ್ಥೆ ಮಾಡಲಾಗಿದೆ.

ನಗರದ ಅನೇಕ ಕಡೆ ರಸ್ತೆ ಹಾಳಾಗಿರುವುದರ ಬಗ್ಗೆ ಇಲ್ಲಿಯೂ ದೂರುಗಳು ಬರುತ್ತಿವೆ. ಮಳೆಗಾಲದ ಕಾರಣಕ್ಕೂ ರಸ್ತೆ ಗುಂಡಿಗಳು ಬೀಳುತ್ತಿರಬಹುದು. ಇದರ ಬಗ್ಗೆಯೂ ಬಿಬಿಎಂಪಿ ಆಯುಕ್ತರು ಆದ್ಯ ಗಮನ ಹರಿಸಬೇಕು ಎಂದು ಉಪಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ.

ರಸ್ತೆ ಗುಂಡಿಗಳನ್ನು ಮುಚ್ಚಲು ಗಡುವು ನೀಡಲಾಗಿದೆ 15 ದಿನಗಳ ನಂತರ ಇಡೀ ನಗರವನ್ನು ತಾವೇ ವೀಕ್ಷಿಸಲು ಪ್ರದಕ್ಷಿಣೆ ಹಾಕಲಾಗುವುದು, ಪ್ರತಿ ರಸ್ತೆಗಳನ್ನು ಪರಿಶೀಲಿಸಲಾಗಿದೆ. ಅಷ್ಟರಲ್ಲಿ ಕೆಲಸ ಸಂಪೂರ್ಣವಾಗಿ ರಸ್ತೆಗುಂಡಿ ಮುಚ್ಚಿರಬೇಕು ಎಂದು ಡಿ.ಕೆ.ಶಿವಕುಮಾರ್ ಆಗಬೇಕು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News