ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷರನ್ನಾಗಿ ಡಾ. ಆರತಿ ಕೃಷ್ಣ ನೇಮಕ; ಸಂಪುಟ ದರ್ಜೆಯ ಸ್ಥಾನಮಾನ

Update: 2023-10-18 11:14 IST
ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷರನ್ನಾಗಿ ಡಾ. ಆರತಿ ಕೃಷ್ಣ ನೇಮಕ; ಸಂಪುಟ ದರ್ಜೆಯ ಸ್ಥಾನಮಾನ

ಡಾ. ಆರತಿ ಕೃಷ್ಣ

  • whatsapp icon

ಬೆಂಗಳೂರು: ಡಾ. ಆರತಿ ಕೃಷ್ಣ  ಅವರನ್ನು ಅನಿವಾಸಿ ಭಾರತೀಯ ಕೋಶ ಇದರ ಉಪಾಧ್ಯಕ್ಷರನ್ನಾಗಿ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಸಂಪುಟ ದರ್ಜೆ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. 

ಕರ್ನಾಟಕದ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವರೂ ಆಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಬೇಗಾನೆ ರಾಮಯ್ಯ ಅವರ ಪುತ್ರಿಯಾಗಿರುವ ಡಾ. ಆರತಿ ಅವರು ಕಾಂಗ್ರೆಸ್ ಪಕ್ಷದೊಂದಿಗೆ ದೀರ್ಘಕಾಲ ಸಂಬಂಧ ಹೊಂದಿದ್ದಾರೆ. ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಎನ್‌ಆರ್‌ಐ ಸೆಲ್‌ನ ಮೊದಲ ಅಧ್ಯಕ್ಷರಾಗಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News