ಡಾ.ಮನಮೋಹನ್ ಸಿಂಗ್‌ ನಿಧನ | ಬೆಳಗಾವಿಯಲ್ಲಿ ನಾಳೆ(ಡಿ.27) ನಡೆಯಬೇಕಿದ್ದ ಕಾಂಗ್ರೆಸ್‌ ಅಧಿವೇಶನ ರದ್ದು

Update: 2024-12-26 18:17 GMT

ಡಾ.ಮನಮೋಹನ್‌ ಸಿಂಗ್ | PC : PTI

ಬೆಂಗಳೂರು : ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಾಳೆ(ಡಿ.27) ನಡೆಯಬೇಕಿದ್ದ ಕಾಂಗ್ರೆಸ್ ಅಧಿವೇಶನ ಹಾಗೂ ಎಲ್ಲಾಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಬೆಳಗಾವಿ ಸುವರ್ಣಸೌಧದಲ್ಲಿ ನಾಳೆ ಮಹಾತ್ಮಾ ಗಾಂಧಿ ಪುತ್ಥಳಿ ಅನಾವರಣ ಹಾಗೂ ಸಾರ್ವಜನಿಕ ಸಮಾವೇಶ ಆಯೋಜಿಸಲಾಗಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಗೊತ್ತಾಗಿದೆ.

ಬೆಳಗಾವಿಯಲ್ಲಿ ಇಂದಿನಿಂದ ಎರಡು ದಿನ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ನಡೆಯುತ್ತಿದೆ. ಮೊದಲ ದಿನವಾದ ಇಂದು(ಡಿ. 26) ಸಭೆಗಳನ್ನು ಮಾಡಿ ಎರಡು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಆದರೆ ಈ ಮಧ್ಯೆ ಮನಮೋಹನ್​​ ಸಿಂಗ್​ ನಿಧನದಿಂದಾಗಿ ನಾಳೆ ನಡೆಯಬೇಕಿದ್ದ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News