ಒಂದು ಕಡೆ ಬರ, ಮತ್ತೊಂದು ಕಡೆ ಪ್ರವಾಹ; 2 ತಿಂಗಳಲ್ಲೇ ಆಡಳಿತ ವ್ಯವಸ್ಥೆ ಕುಸಿತ: ಕೋಟ ಶ್ರೀನಿವಾಸ ಪೂಜಾರಿ

Update: 2023-07-26 13:57 GMT

ಬೆಂಗಳೂರು, ಜು. 26: ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ಆಡಳಿತ ವ್ಯವಸ್ಥೆ ಕೇವಲ ಎರಡೇ ತಿಂಗಳಲ್ಲಿ ಕುಸಿತ ಕಂಡಿದೆ’ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಇಂದಿಲ್ಲಿ ಆರೋಪಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಒಂದು ಕಡೆ ಬರ, ಮತ್ತೊಂದು ಕಡೆ ಪ್ರವಾಹ ಈ ಮಧ್ಯೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಲೂ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವುಗಳ ಜತೆಗೆ ರಾಜ್ಯದ ಕಾನೂನು-ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ’ ಎಂದು ಟೀಕಿಸಿದರು.

ಬಿ.ಕೆ.ಹರಿಪ್ರಸಾದ್ ತನಗೆ ಮಂತ್ರಿ ಸ್ಥಾನ ನೀಡಿಲ್ಲ ಎಂದು ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯನವರನ್ನು ಕೆಳಗಿಳಿಸುವ ಮಾತಾಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಿಂಗಾಪುರ ಆಪರೇಷನ್ ಎಂದು ಹೇಳುತ್ತಿದ್ದಾರೆ. ಸರಕಾರದ ವೈಫಲ್ಯಗಳನ್ನು ಮರೆಮಾಚಲು ಶಿವಕುಮಾರ್ ವಿಪಕ್ಷಗಳ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಅವರು ದೂರಿದರು.

ಸರಕಾರ ಅಧಿಕಾರಕ್ಕೆ ಬಂದು ಎರಡೇ ತಿಂಗಳು ಆಗಲೇ ಶಾಸಕರು, ಸಚಿವರ ವಿರುದ್ಧವೇ ದೂರು ನೀಡಿದ್ದಾರೆ. ಈ ಸರಕಾರದಲ್ಲಿ ಏನು ನಡೆಯುತ್ತಿದೆ ಎಂಬುದೇ ಗೊತ್ತಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ವಾಗ್ದಾಳಿ ನಡೆಸಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News