ಬರ ಪರಿಹಾರ ಕೆಲಸ ಪ್ರಾರಂಭವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2023-11-20 09:10 GMT

ವಿಜಯಪುರ, ನವೆಂಬರ್ 20: ಬರ ಪರಿಹಾರದ ಕೆಲಸ ಪ್ರಾರಂಭವಾಗಿದೆ.  ದನಕರುಗಳಿಗೆ ಮೇವು ಒದಗಿಸಲಾಗಿದೆ. ಕುಡಿಯುವ ನೀರು, ಮೇವಿಗೆ ಅಭಾವವಿಲ್ಲ, ಜನರಿಗೆ ಕೆಲಸ ಕೊಡುವ ಕೆಲಸವೂ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 ಸೋಮವಾರ ವಿಜಯಪುರ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರಗಾಲ ಬಂದಾಗ 150 ದಿನಗಳ ಕೆಲಸ ನೀಡುವುದು ಕಡ್ಡಾಯ. ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡಬೇಕು. ಅನುಮತಿ ಕೋರಿ ನಾವು ಪತ್ರ ಬರೆದಿದ್ದು ಇಂದಿನವರೆಗೂ ಉತ್ತರ ಬಂದಿಲ್ಲ. ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡ ಬಂದು ಹೋಗಿ ಒಂದು ತಿಂಗಳ ಮೇಲಾಗಿದ್ದರೂ ಇಂದಿನವರೆಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಎನ್.ಡಿ.ಆರ್ ಎಫ್ ಮಾರ್ಗಸೂಚಿಯಲ್ಲಿ ಮಾರ್ಪಾಡು ತರಲು ಬರೆದಿರುವ ಪತ್ರಕ್ಕೂ ಕೆಂದ್ರದಿಂದ ಉತ್ತರವಿಲ್ಲ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳನ್ನು ಕೆಳಗಿಳಿಸಲು ಕಾಯುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಮ್ಮ ಪಕ್ಷದ್ದು ನಾವು ನೋಡಿಕೊಳ್ಳುತ್ತೇವೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News