ಕೆಸೆಟ್ ಪ್ರಶ್ನೆ ಪತ್ರಿಕೆ ಕನ್ನಡದಲ್ಲಿ ನೀಡಲು ಡಾ.ಪುರುಷೋತ್ತಮ ಬಿಳಿಮಲೆ ಸೂಚನೆ

Update: 2024-11-13 13:39 GMT

ಡಾ.ಪುರುಷೋತ್ತಮ ಬಿಳಿಮಲೆ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನ.24ರಂದು ನಡೆಸಲು ಉದ್ದೇಶಿಸಿರುವ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ(ಕೆಸೆಟ್) ಮನೋವಿಜ್ಞಾನ ವಿಷಯದ ಪ್ರಶ್ನೆ ಪತ್ರಿಕೆಯನ್ನು ಕೇವಲ ಆಂಗ್ಲ ಭಾಷೆಯಲ್ಲಿ ನೀಡದೆ ಕನ್ನಡ ಭಾಷೆಯಲ್ಲೂ ನೀಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಸೂಚನೆ ನೀಡಿದ್ದಾರೆ.

ಬುಧವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಪತ್ರ ಬರೆದಿರುವ ಅವರು, ಪರೀಕ್ಷಾ ಪ್ರಾಧಿಕಾರದ ನಿರ್ಣಯ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಮಾಡುತ್ತಿರುವ ಅನ್ಯಾಯವಷ್ಟೇ ಅಲ್ಲ, ಈ ನೆಲದ ಕಾನೂನನ್ನು ಉಲ್ಲಂಘಿಸುವ ವಿಷಯವಾಗಿರುತ್ತದೆ. ಈ ಕುರಿತಂತೆ ಅದು ಕೂಡಲೇ ಕ್ರಮವಹಿಸಿ ಕನ್ನಡ ಭಾಷೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಒದಗಿಸುವುದು ಮತ್ತು ಈ ಅಚಾತುರ್ಯಕ್ಕೆ ಕಾರಣವೇನು ಎಂಬ ಕುರಿತು ವರದಿ ಸಲ್ಲಿಸುವುದು ಎಂದು ತಿಳಿಸಿದ್ದಾರೆ.

ಒಂದು ವೇಳೆ ಆಂಗ್ಲಭಾಷೆಯಲ್ಲಿ ಮಾತ್ರ ಪರೀಕ್ಷೆಯನ್ನು ನಿರ್ವಹಿಸಿ ಕನ್ನಡ ಭಾಷಾ ವಿದ್ಯಾರ್ಥಿಗಳಿಗೆ ಅನ್ಯಾಯವಾದಲ್ಲಿ ಮುಂದಿನ ಆಗುಹೋಗುಗಳಿಗೆ ತಾವೇ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ ಎಂದು ಡಾ.ಬಿಳಿಮಲೆ ಪರೀಕ್ಷಾ ಪ್ರಾಧಿಕಾರದ ಮುಖ್ಯಸ್ಥರಿಗೆ ಎಚ್ಚರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News