‘ದಸರಾ ವಿಶೇಷ ಬಸ್’ ಕಾರ್ಯಾಚರಣೆಗೆ ಚಾಲನೆ

Update: 2024-10-07 14:25 GMT

ಬೆಂಗಳೂರು : ದಸರಾ ಪ್ರಯುಕ್ತ ಕೆಎಸ್ಸಾರ್ಟಿಸಿ ವತಿಯಿಂದ ತ್ವರಿತ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಸೋಮವಾರ ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆಯ ವಾಹನಗಳಿಗೆ ಚಾಲನೆ ನೀಡಲಾಯಿತು.

ಮುಂದಿನ 10 ದಿನಗಳ ವರೆಗೆ ಮೈಸೂರು ರಸ್ತೆ ಬಸ್ ನಿಲ್ದಾಣದಲ್ಲಿ ದಸರಾ ಕ್ಯಾಂಪ್ ಇರಲಿದ್ದು, ಬೆಂಗಳೂರು ಕೇಂದ್ರೀಯ ವಿಭಾಗ, ರಾಮನಗರ, ಚಿಕ್ಕಬಳ್ಳಾಪುರ ಕೋಲಾರ ಹಾಗೂ ಮೈಸೂರು ವಿಭಾಗಗಳಿಂದ ಒಟ್ಟು 700 ಹೆಚ್ಚುವರಿ ವಾಹನಗಳನ್ನು ಬೆಂಗಳೂರು ಮೈಸೂರು ನಡುವೆ ಕಾರ್ಯಾಚರಣೆ ಮಾಡಲಾಗುತ್ತದೆ.

ಇದರೊಂದಿಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಊರುಗಳಿಗೆ 2 ಸಾವಿರ ವಿಶೇಷ ಬಸ್ಸುಗಳ ಕಾರ್ಯಾಚರಣೆ ನಡೆಯಲಿದೆ. ಇದೇ ವೇಳೆ ನಿಗಮದ ಹಿರಿಯ ಅಧಿಕಾರಿಗಳು, ವಿಭಾಗೀಯ ನಿಯಂತ್ರಣಾಧಿಕಾರಿ ಹಾಜರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News