ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಕುಮಾರಸ್ವಾಮಿ, ಉಪನಾಯಕಿಯಾಗಿ ಶಾರದಾ ಪೂರ್ಯಾನಾಯ್ಕ್ ಆಯ್ಕೆ

Update: 2023-07-03 14:59 GMT

ಬೆಂಗಳೂರು, ಜು. 3: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಎಚ್.ಡಿ.ಕುಮಾರಸ್ವಾಮಿ ಮತ್ತು ಉಪನಾಯಕರನ್ನಾಗಿ ಶಾರದಾ ಪೂರ್ಯಾನಾಯ್ಕ್ ಅವರನ್ನು ಆಯ್ಕೆ ಮಾಡಲಾಗಿದೆ.

ಸೋಮವಾರ ವಿಧಾನಸಭೆಯಲ್ಲಿ ಈ ಕುರಿತು ಪ್ರಕಟಿಸಿದ ಸ್ಪೀಕರ್ ಯು.ಟಿ.ಖಾದರ್ ಅವರು, ‘ಜೆಡಿಎಸ್ ರಾಜ್ಯಾಧ್ಯಕ್ಷರಾದ ಸಿ.ಎಂ.ಇಬ್ರಾಹೀಂ ಈ ಸಂಬಂಧ ಪತ್ರ ಬರೆದಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಶಾಸಕರೂ ಆಗಿರುವ ಎಚ್.ಕುಮಾರಸ್ವಾಮಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಹಾಗೂ ಶಿವಮೊಗ್ಗ ಗ್ರಾಮೀಣ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ್‍ರನ್ನು ಉಪನಾಯಕಿಯನ್ನಾಗಿ ಆಯ್ಕೆಮಾಡಲಾಗಿದೆ ಎಂದು ತಿಳಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News