ಕರ್ನಾಟಕಕ್ಕೆ ಬರ ಪರಿಹಾರ ನೀಡಲು ಚುನಾವಣಾ ಆಯೋಗ ಅನುಮತಿ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರಕಾರ

Update: 2024-04-22 07:59 GMT

Photo : PTI

ಹೊಸದಿಲ್ಲಿ : ಕರ್ನಾಟಕದಲ್ಲಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೆಲ ಕ್ಷೇತ್ರಗಳಲ್ಲಿನ ಸಮಸ್ಯೆಗಳನ್ನು ನಿಭಾಯಿಸಲು ಕರ್ನಾಟಕಕ್ಕೆ ಸಹಾಯ ಮಾಡಲು ಚುನಾವಣಾ ಆಯೋಗ ತನಗೆ ಅನುಮತಿಸಿದೆ ಎಂದು ಕೇಂದ್ರ ಸರ್ಕಾರ ಇಂದು ಸುಪ್ರೀಂ ಕೋರ್ಟಿಗೆ ಹೇಳಿದೆ.

ಕೇಂದ್ರ ಸರಕಾರ ಶೀಘ್ರ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಅಟಾರ್ನಿ ಜನರಲ್‌ ಆರ್‌ ವೆಂಕಟರಮಣಿ ಹೇಳಿದ ನಂತರ ನ್ಯಾಯಮೂರ್ತಿಗಳಾದ ಬಿ ಆರ್‌ ಗವಾಯಿ ಮತ್ತು ಸಂದೀಪ್‌ ಮೆಹ್ತಾ ಅವರ ಪೀಠ ವಿಚಾರಣೆಯನ್ನು ಮುಂದೂಡಿದೆ.

“ಈಗ ಯಾವುದೇ ವಾದಗಳು ಬೇಡ, ಕೆಲ ಬೆಳವಣಿಗೆಗಳು ಈ ಪ್ರಕರಣದಲ್ಲಿ ಮುಂದಿನ ಸೋಮವಾರದೊಳಗೆ ನಡೆಯಬಹುದು,” ಎಂದು ಅಟಾರ್ನಿ ಜನರಲ್‌ ಹೇಳಿದರು.

ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ರಾಜ್ಯಕ್ಕೆ ಆರ್ಥಿಕ ಸಹಾಯ ಒದಗಿಸುತ್ತಿಲ್ಲ ಎಂದು ದೂರಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟಿನ ಕದ ತಟ್ಟಿತ್ತು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News