‘ಯತೀಂದ್ರ ಹೇಳಿಕೆ’ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು: ಬಸವರಾಜ ಬೊಮ್ಮಾಯಿ

Update: 2023-09-19 23:30 IST
‘ಯತೀಂದ್ರ ಹೇಳಿಕೆ’ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು: ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ

  • whatsapp icon

ಬೆಂಗಳೂರು: 2023ನೆ ಸಾಲಿನ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯ ಅವರು ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಅವರ ಪುತ್ರ ಡಾ.ಯತೀಂದ್ರ ನೀಡಿರುವ ಹೇಳಿಕೆ ನಿಜವಾಗಿದ್ದರೆ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಮಂಗಳವಾರ ಈ ಸಂಬಂಧ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯತೀಂದ್ರ ಅವರು ಹೇಳಿದ್ದು ನಿಜವಾಗಿದ್ದರೆ, ಅದನ್ನು ಚುನಾವಣಾ ಆಯೋಗ ಗಮನಿಸಬೇಕಾಗುತ್ತದೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಒಂದು ಚುನಾವಣಾ ತಕರಾರು ಅರ್ಜಿ ಇದೆ. ಯತೀಂದ್ರ ಹೇಳಿದ್ದಕ್ಕೆ ಸಾಕ್ಷ್ಯಾಧಾರ ಇದ್ದರೆ ಆಯೋಗ ಇದನ್ನು ಪರಿಗಣಿಸಬೇಕಾಗುತ್ತದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News