ವಿದ್ಯುತ್‌ ಅವಘಡ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

Update: 2023-08-12 10:49 GMT

ಬೆಳಗಾವಿ: ನಿರ್ಮಾಣ ಹಂತದ ಮನೆಯಲ್ಲಿ ವಿದ್ಯುತ್ ತಗುಲಿ ಅಜ್ಜ, ಅಜ್ಜಿ ಮತ್ತು ಮೊಮ್ಮಗಳು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮಹಿಳಾ ಮತ್ತು ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. 

ಘಟನೆ ನಡೆದ ಸ್ಥಳಕ್ಕೆ ಧಾವಿಸಿದ ಅವರು, ಮೃತ ಕುಟುಂಬದವರಿಗೆ ಸಾಂತ್ವನ ಹೇಳಿ, ಧೈರ್ಯವನ್ನು ತುಂಬಿದರು. 

ಇದೇ ವೇಳೆ ಮುಖ್ಯಮಂತ್ರಿಗಳಿಗೆ ಸ್ಥಳದಲ್ಲೇ ಕರೆ ಮಾಡಿ ಈ ಘಟನೆಯ ಬಗ್ಗೆ ವಿವರಿಸಿ, ಪ್ರತಿ ವ್ಯಕ್ತಿಗೆ ತಲಾ 2 ಲಕ್ಷ ರೂ,ಗಳನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಚಿವೆ,  ʼʼನನ್ನ ಕರೆಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ತ್ವರಿತಗತಿಯಲ್ಲಿ ಪರಿಹಾರದ ಹಣ ಬಿಡುಗಡೆಗೊಳಿಸಲು ಆದೇಶ ಹೊರಡಿಸಿದ್ದಾರೆ, ಇದರ ಜತೆಗೆ ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ತಕ್ಕ ಮಟ್ಟಿಗೆ ಆರ್ಥಿಕ ಸಹಾಯವನ್ನು ಸಹ ಮಾಡಿದ್ದೇನೆʼʼ ಎಂದು ತಿಳಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News