ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಬಿಸಿ; ಪ್ರತಿಯೂನಿಟ್‍ಗೆ 36 ಪೈಸೆ ಹೆಚ್ಚಳ, ಎ.1ರಿಂದ ಜಾರಿ
Update: 2025-03-20 20:51 IST

ಸಾಂದರ್ಭಿಕ ಚಿತ್ರ
ಬೆಂಗಳೂರು : ಬೇಸಿಗೆ ಬಿಸಿಲಿನ ನಡುವೆಯೆ ರಾಜ್ಯದ ಜನರಿಗೆ ವಿದ್ಯುತ್ ದರ ಏರಿಕೆ ಬಿಸಿಯೂ ತಟ್ಟಲಿದೆ. ಪ್ರತಿಯೂನಿಟ್‍ಗೆ 36 ಪೈಸೆಯಷ್ಟು ಹೆಚ್ಚಳ ಮಾಡಿದ್ದು, ಎಪ್ರಿಲ್ 1ರಿಂದಲೇ ಹೊಸ ದರ ಅನ್ವಯವಾಗಲಿದೆ ಎಂದು ಕೆಇಆರ್‌ಸಿ ತಿಳಿಸಿದೆ.
ಗೃಹಜ್ಯೋತಿ ಯೋಜನೆಯಡಿ ಗರಿಷ್ಠ 200 ಯೂನಿಟ್ ವರೆಗೆ ವಿದ್ಯುತ್ ಶುಲ್ಕವನ್ನು ರಾಜ್ಯ ಸರಕಾರವೇ ಪಾವತಿಸಲಿದ್ದು, ಗೃಹಜ್ಯೋತಿ ಯೋಜನೆ ಸೌಲಭ್ಯದಿಂದ ಹೊರಗುಳಿದ ಮತ್ತು ವಾಣಿಜ್ಯ ಬಳಕೆ ವಿದ್ಯುತ್ ಗ್ರಾಹಕರಿಗೆ ಬೆಲೆ ಏರಿಕೆ ಅನ್ವಯವಾಗಲಿದೆ.
ಈಗಾಗಲೇ ಅಗತ್ಯ ವಸ್ತುಗಳ ಬೆಲೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್‍ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾ ಸಿಬ್ಬಂದಿಯ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್‍ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ.