ವಿಕ್ರಂ ಗೌಡ ಹತ್ಯೆ | ನಕ್ಸಲ್ ಚಟುವಟಿಕೆ ನಿಗ್ರಹಿಸಲು ಎನ್‌ಕೌಂಟರ್‌ : ಸಿಎಂ ಸಿದ್ದರಾಮಯ್ಯ

Update: 2024-11-20 09:17 GMT

ಸಿದ್ದರಾಮಯ್ಯ

ಬೆಂಗಳೂರು: ʼವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು, ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಕ್ರಂಗೌಡ  ಎನ್‌ಕೌಂಟರ್‌ನಲ್ಲಿ ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು ಅನುಮಾನಗಳನ್ನು ವ್ಯಕ್ತಪಡಿಸುತ್ತಿರುವ ಬಗ್ಗೆ ಬುಧವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ʼವಿಕ್ರಂಗೌಡ ಅವರಿಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಅವರು ಶರಣಾಗಿರಲಿಲ್ಲ. ವಿಕ್ರಂಗೌಡ ಅವರನ್ನು ಹಿಡಿದವರಿಗೆ ಕೇರಳ ಸರಕಾರ 25 ಲಕ್ಷ ಹಾಗೂ ಕರ್ನಾಟಕ ಸರಕಾರ 5 ಲಕ್ಷ ಬಹುಮಾನವನ್ನು ಘೋಷಿಸಿತ್ತುʼ ಎಂದು ವಿವರಿಸಿದರು.

ನಬಾರ್ಡ್ ಸಾಲದ ಮೊತ್ತ ಹೆಚ್ಚಿಸುವಂತೆ ಕೇಂದ್ರ ಸಚಿವರಿಗೆ ಮನವಿ :

ಹೊಸದಿಲ್ಲಿ ಪ್ರವಾಸದ ವಿವರ ನೀಡಿದ ಮುಖ್ಯಮಂತ್ರಿಗಳು, ʼನಾಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಲು ಸಮಯ ಕೋರಲಾಗಿದೆ. ರಾಜ್ಯಕ್ಕೆ ನಬಾರ್ಡ್ ನಿಂದ  ನೀಡಲಾಗುವ ಸಾಲದ ಮೊತ್ತವನ್ನು ಕಳೆದ ವರ್ಷದ 5600 ಕೋಟಿ ರೂ.ಗಳಿಂದ , ಈ ವರ್ಷ 2340 ಕೋಟಿ ರೂ. ಗಳಿಗೆ ಇಳಿಸಲಾಗಿದೆ. ಆದ್ದರಿಂದ ಕೇಂದ್ರ ವಿತ್ತ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಮನವಿ ಮಾಡಿಕೊಳ್ಳಲಾಗುವುದು. ಈ ಮಧ್ಯೆ ಸಮಯಾವಕಾಶವಿದ್ದಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಾಗುವುದುʼ ಎಂದರು.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News