ಈಶ್ವರಪ್ಪರ 'ಗುಂಡಿಕ್ಕಿ ಕೊಲ್ಲಿ' ಹೇಳಿಕೆ | ಗೋಡ್ಸೆ ಸಂತತಿಯವರ ಭಯೋತ್ಪಾದಕ ಮನಸ್ಥಿತಿ ಅನಾವರಣ: ಕಾಂಗ್ರೆಸ್ ಟೀಕೆ

Update: 2024-02-09 06:13 GMT

ಬೆಂಗಳೂರು, ಫೆ.9: ಬಿಜೆಪಿ ಮುಖಂಡ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರ 'ಗುಂಡಿಕ್ಕಿ ಕೊಲ್ಲಿ' ಹೇಳಿಕೆ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್, ಮಹಾತ್ಮ ಗಾಂಧಿಯವರಿಗೆ ಗುಂಡಿಕ್ಕಿದ ಗೋಡ್ಸೆ ಸಂತತಿಯವರಾದ ರಾಜ್ಯ ಬಿಜೆಪಿ ನಾಯಕರ ಭಯೋತ್ಪಾದಕ ಮನಸ್ಥಿತಿ ಅನಾವರಣವಾಗಿದೆ ಎಂದು ಹೇಳಿದೆ.

ಈ ಬಗ್ಗೆ 'X'ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, 'ಸಂಸದ ಡಿ. ಕೆ ಸುರೇಶ್ ಹಾಗೂ ಶಾಸಕ ವಿನಯ್ ಕುಲಕರ್ಣಿಯವರನ್ನು ಗುಂಡಿಕ್ಕಿ ಕೊಲ್ಲಬೇಕು ಎನ್ನುವ ಮೂಲಕ ಕೆ.ಎಸ್.ಈಶ್ವರಪ್ಪ ಭಯೋತ್ಪಾದನೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡಿದ್ದಾರೆ. ಈ “ಗುಂಡು“ ಹಾಕುವ ವ್ಯಕ್ತಿಯ ಮೇಲೆ ಭಯೋತ್ಪಾದನೆ ನಿಗ್ರಹ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಗೃಹ ಸಚಿವರಲ್ಲಿ ಮನವಿ ಮಾಡುತ್ತೇವೆ' ಎಂದು ಒತ್ತಾಯಿಸಿದೆ.

ದಾವಣಗೆರೆಯಲ್ಲಿ ಗುರುವಾರ ನಡೆದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ್ದ ಈಶ್ವರಪ್ಪ, ‘ಸಂಸದ ಡಿ.ಕೆ.ಸುರೇಶ್ ಹಾಗೂ ಶಾಸಕ ವಿನಯ್ ಕುಲಕರ್ಣಿ ರಾಷ್ಟ್ರದ್ರೋಹಿಗಳು. ಇವರ ಹಾಗೆ ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ’ ಎಂದು ಹೇಳಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News