ಬೆಂಗಳೂರಿನಲ್ಲೆ ಎರಡನೆ ವಿಮಾನ ನಿಲ್ದಾಣ ಸ್ಥಾಪನೆ: ಸಚಿವ ಎಂ.ಬಿ. ಪಾಟೀಲ್

Update: 2024-07-16 17:19 GMT

ಬೆಂಗಳೂರು: ಮುಂಬೈ ಸೇರಿದಂತೆ ಇತರ ಪ್ರಮುಖ ನಗರಗಳು ಎರಡು ವಿಮಾನ ನಿಲ್ದಾಣಗಳನ್ನು ಹೊಂದಿರುವಂತೆ ಬೆಂಗಳೂರು ನಗರದಲ್ಲಿಯೂ ಎರಡನೆ ವಿಮಾನ ನಿಲ್ದಾಣ ಸ್ಥಾಪಿಸುವ ಉದ್ದೇಶ ಸರಕಾರಕ್ಕಿದೆ ಎಂದು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಮಂಗಳವಾರ ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ನವೀನ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಮತ್ತು ಬೆಂಗಳೂರಿನ ಹಿತಾಸಕ್ತಿಗೆ ಪೂರಕವಾಗಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಲಾಗುತ್ತದೆ. ಬೆಂಗಳೂರಿಗೆ 2ನೆ ವಿಮಾನ ನಿಲ್ದಾಣ ಮಾಡುವ ಯೋಜನೆಯಿದೆ. ನಮಗೆ 2033ರ ವರೆಗೂ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅವಕಾಶವಿದೆ. ಆ ನಂತರ ನಾವು ವಿಮಾನ ನಿಲ್ದಾಣ ಮಾಡಬಹುದು ಎಂದು ಹೇಳಿದರು.

ಈಗಿನಿಂದಲೇ ಪ್ರಸ್ತಾಪ ಮಾಡುತ್ತಿದ್ದೇವೆ. ಏಳೆಂಟು ಸ್ಥಳಗಳನ್ನು ಗುರುತಿಸಿದ್ದೇವೆ. ಸೂಕ್ತ ಮಾನದಂಡದ ಮೇಲೆ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಗುರಿ ಇದೆ. ಲಾಜಿಸ್ಟಿಕ್, ಪ್ಯಾಸೆಂಜರ್ ಕನೆಕ್ಟಿವಿಟಿ ನೋಡಿ ಬೆಂಗಳೂರಿಗೆ ರಾಜ್ಯಕ್ಕೆ ಅನುಕೂಲವಾಗುವ ರೀತಿಯಲ್ಲಿಯೇ ಮಾಡಲಾಗುತ್ತದೆ. ರಾಜ್ಯದ ಹಿತಾಸಕ್ತಿಗೆ ಪೂರಕವಾಗಿ ಮಾಡಲಾಗುತ್ತದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

ಚಿತ್ರದುರ್ಗದಲ್ಲಿ ಜಿಲ್ಲಾ ವಿಮಾನ ನಿಲ್ದಾಣ ಮಾಡೋಣ. ಆದರೆ, ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ಅತಿ ಅಗತ್ಯ ಮತ್ತು ಸೂಕ್ತ ಸ್ಥಳವಾಗಿದೆ. ಆದರೆ, ಚಿತ್ರದುರ್ಗಕ್ಕೆ ಕೈಗಾರಿಕೆ ಸ್ಥಾಪಿಸುವ ಪ್ರಯತ್ನ ಮಾಡುತ್ತೇವೆ ಎಂದು ಎಂ.ಬಿ.ಪಾಟೀಲ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News