6 ವರ್ಷ ಕಳೆದರೂ ಗೌರಿಗೆ ಸಿಗದ ನ್ಯಾಯ

Update: 2023-09-05 04:43 GMT

ಬೆಂಗಳೂರು, ಸೆ.5: ಚಿಂತಕಿ, ವಿಚಾರವಾದಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯಾಗಿ ಇಂದಿಗೆ 6 ವರ್ಷ. ಗೌರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ, 10 ಸಾವಿರ ಪುಟಕ್ಕೂ ಹೆಚ್ಚಿನ ಚಾರ್ಜ್‌ ಶೀಟ್ ಸಲ್ಲಿಸಲಾಗಿದೆ. ಆದರೂ ತಪ್ಪಿತಸ್ಥರಿಗೆ ಇನ್ನೂ ಶಿಕ್ಷೆಯಾಗದೇ ಇರುವುದು ಸಾಹಿತಿಗಳು, ಚಿಂತಕರು, ಪತ್ರಕರ್ತ ಹಾಗೂ ಹೋರಾಟಗಾರರಲ್ಲಿ ನೂರಾರು ಪ್ರಶ್ನೆಗಳು ಮೂಡುತ್ತಿದ್ದು, ಕೋರ್ಟ್‌ ನಲ್ಲಿ ವಿಚಾರಣೆ ಪೂರ್ಣಗೊಂಡು ಆರೋಪಿಗಳಿಗೆ ಶೀಘ್ರವೇ ಶಿಕ್ಷೆಯಾಗಬೇಕೆಂದು ಒಕ್ಕೊರಲಿನ ಆಗ್ರಹ ಕೇಳಿಬಂದಿದೆ.

ಗೌರಿ ಲಂಕೇಶ್ ಅವರ ಹತ್ಯೆಯಾದ ನಂತರ ಒಟ್ಟು 18 ಆರೋಪಿಗಳ ಪೈಕಿ 17 ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ವಿಕಾಸ್ ಪಾಟೀಲ್ ತಲೆಮರೆಸಿಕೊಂಡಿದ್ದಾನೆ. ಈ ಪ್ರಕರಣದ ಕುರಿತು ತನಿಖೆ ನಡೆಸಿದ ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ 1ನೇ ಸೆಷನ್ಸ್ ಕೋರ್ಟ್ಗೆ ಒಂದು ವರ್ಷದ ಬಳಿಕ 400ಕ್ಕೂ ಹೆಚ್ಚು ಸಾಕ್ಷಿಗಳು ಹಾಗೂ 1 ಸಾವಿರಕ್ಕೂ ಹೆಚ್ಚು ಪುರಾವೆಗಳನ್ನು ದಾಖಲಿಸಿರುವ ಸುಮಾರು 10 ಸಾವಿರ ಪುಟಕ್ಕೂ ಹೆಚ್ಚಿನ ಚಾರ್ಜ್ಶೀಟ್ ಅನ್ನು ಸಲ್ಲಿಸಿದ್ದಾರೆ. ಇದರ ಮಧ್ಯೆ ಪ್ರಗತಿಪರ ಚಿಂತಕರುಗಳು ‘ಗೌರಿ ಪ್ರಕರಣದ ವಿಚಾರಣೆ ಎಲ್ಲಿಗೆ ಬಂತು’ ಎಂಬ ಪ್ರಶ್ನೆ ಮಾಡಲು ಪ್ರಾರಂಭ ಮಾಡಿದ್ದರಿಂದ ಕೋರ್ಟ್ನಲ್ಲಿ ಐದು ವರ್ಷಗಳ ನಂತರದಲ್ಲಿ ಪ್ರಕರಣದ ಕುರಿತು ವಿಚಾರಣೆ ಪ್ರಾರಂಭವಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರ ಣೆಯು ಪ್ರತೀ ತಿಂಗಳಲ್ಲಿ ಮೊದಲ ಅಥವಾ ಎರಡನೇ ವಾರದ ಐದು ದಿನಗಳಲ್ಲಿ ನಡೆಯುತ್ತದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಬಾಲನ್ ಅವರನ್ನು ಸರಕಾರ ನೇಮಿಸಿದ್ದು, ಅವರೇ 2018ರಿಂದಲೂ ಪ್ರಾಸಿಕ್ಯೂಷನ್ ಪರವಾಗಿ ವಾದ ಮಂಡಿಸುತ್ತಿದ್ದಾರೆ. ಇದರ ಜೊತೆಗೆ ವಿಚಾರಣೆ ಸಾಗುತ್ತಿರುವಾಗಲೇ ಕೋರ್ಟ್ನ ನ್ಯಾಯಪೀಠದಿಂದ ನಾಲ್ವರು ನ್ಯಾಯಾಧೀಶರು ಬದಲಾಗಿದ್ದಾರೆ.

ಆರೋಪಿಗಳ ಪರವಾಗಿ ವಾದ ಮಂಡಿಸುತ್ತಿರುವ ಏಳೆಂಟು ಹಿರಿಯ ಮತ್ತು ಕಿರಿಯ ವಕೀಲರುಗಳು ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ ಎಂದು ಪ್ರಾಸಿಕ್ಯೂಷನ್ ಆರೋಪ ಮಾಡಿದೆ. ಈ ಎಲ್ಲ ಕಾರಣಗಳಿಂದಾಗಿ ಪ್ರಕರಣದ ವಿಚಾರಣೆ ವಿಳಂಬವಾಗುತ್ತಿದೆ ಎನ್ನಲಾಗಿದೆ. ಒಟ್ಟು 18 ಆರೋಪಿಗಳ ವಿರುದ್ಧ ‘ಾರತೀಯ ದಂಡ ಸಂಹಿತೆಯ ಸೆಕ್ಷನ್ 302, 120ಬಿ, 114, 118, 109, 201, 203, 204 ಮತ್ತು 35, ಸಶಸ್ತ್ರ ಕಾಯ್ದೆಯ ಸೆಕ್ಷನ್ಗಳಾದ 25(1), 25(1ಃ), 27(1) ಮತ್ತು ಕೋಕಾ ಕಾಯ್ದೆಯ ಸೆಕ್ಷನ್ಗಳಾದ 3(1), 3(2), 3(3), 3(4) ಅಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆ, ಪರಶುರಾಮ್ ವಾಗ್ಮೊರೆ, ಗಣೇಶ್ ಮಿಸ್ಕಿನ್, ಅಮಿತ್ ಬಡ್ಡಿ, ಅಮಿತ್ ದೆಗ್ವೇಕರ್, ‘ರತ್ ಕುರ್ಣೇ, ಸುರೇಶ್ ಎಚ್.ಎಲ್., ರಾಜೇಶ್ ಬಂಗೇರ, ಸು‘ನ್ವ ಗೊಂದಲೇಕರ್, ಶರದ್ ಕಾಲಸ್ಕರ್, ಮೋಹನ್ ನಾಯಕ್, ವಾಸುದೇವ ಸೂರ್ಯವಂಶಿ, ಸುಜಿತ್ ಕುಮಾರ್, ಮನೋಹರ್ ಎಡವೆ, ಶ್ರೀಕಾಂತ್ ಪಂಗರ್ಕರ್, ಕೆ.ಟಿ.ನವೀನ್ಕುಮಾರ್ ಹಾಗೂ ಹೃಷಿಕೇಶ್ ದೇವಡೇಕರ್ ಈ ಎಲ್ಲ ಆರೋಪಿಗಳೂ ನಾಲ್ಕೆ‘ದು ವರ್ಷಗಳಿಂದ ನ್ಯಾಯಾಂಗ ಬಂ‘ನದಲ್ಲಿದ್ದಾರೆ. ಅಮೋಲ್ ಕಾಳೆಯನ್ನೂ ಒಳಗೊಂಡಂತೆ 7 ಆರೋಪಿಗಳು ಮಹಾರಾಷ್ಟ್ರದವರು, ಉಳಿದವರು ಕರ್ನಾಟಕ ರಾಜ್ಯದವರು ಆಗಿದ್ದಾರೆ.

ಈ ಎಲ್ಲ ಆರೋಪಿಗಳಿಗೂ ಸನಾತನ ಸಂಸ್ಥೆ ಮತ್ತು ‘ಹಿಂದೂ ಜನ ಜಾಗೃತಿ ಸಂಸ್ಥೆ’ಗಳೊಂದಿಗೆ ಪ್ರತ್ಯಕ್ಷ ಹಾಗೂ ಪರೋಕ್ಷ ಸಂಬಂ‘ಗಳಿವೆ ಎಂಬುದು ಪ್ರಾಸಿಕ್ಯೂಷನ್ ಪತ್ತೆ ಹಚ್ಚಿರುವ ಸಂಗತಿಯಾಗಿದ್ದು, ಸನಾತನ ಸಂಸ್ಥೆಯ ಸಿದ್ಧಾಂತ ಮತ್ತು ಗುರಿಗಳು ಈ ಆರೋಪಿಗಳನ್ನು ಹತ್ಯೆ ಮಾಡಲು ಪ್ರೇರೇಪಿಸಿದೆ ಎಂದು ಪ್ರಾಸಿಕ್ಯೂಷನ್ ಆರೋಪವಾಗಿದೆ.

ಸನಾತನ ಸಂಸ್ಥೆಯ ಮಾರ್ಗ ದರ್ಶಕ ಗ್ರಂಥವಾಗಿರುವ ‘ಕ್ಷಾತ್ರ ‘ರ್ಮ ಸಾ‘ನ’ದ ಪ್ರಕಾರ ಹಿಂದೂ/ ಸನಾತನ ‘ರ್ಮಕ್ಕೆ ಕಂಟಕಪ್ರಾಯವಾಗಿರುವ ಜನರನ್ನು ಹತ್ಯೆ ಮಾಡುವ ಮೂಲಕ ಸನಾತನಕ್ಕೆ ಇರುವ ಅಡ್ಡಿಯನ್ನು ನಿವಾರಿಸಬೇಕು. ಅದರಲ್ಲೂ ಸ್ವಧರ್ಮೀಯರಲ್ಲೇ ಇರುವ ದ್ರೋಹಿಗಳನ್ನು ಶಿಕ್ಷಿಸಬೇಕು. ಈ ಸಿದ್ಧಾಂತವೇ ಆರೋಪಿಗಳಿಗೆ ಗೌರಿ ಹತ್ಯೆ ಕೊಲೆಗೆ ಪ್ರೇರಣೆ ನೀಡಿತು. ಈ ಅಪರಾ‘ದಲ್ಲಿ ಒಬ್ಬೊಬ್ಬರದ್ದು ಒಂದೊಂದು ನಿರ್ದಿಷ್ಟ ಪಾತ್ರವಿದೆ ಎಂಬುದು ಪ್ರಾಸಿಕ್ಯೂಷನ್ ಆರೋಪವಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆ ತಂಡದವರೇ ಮಹಾರಾಷ್ಟ್ರದ ದಾಬೋಲ್ಕರ್, ಪನ್ಸಾರೆ ಹಾಗೂ ಕರ್ನಾಟಕದ ಸಂಶೋ‘ನ ಪ್ರೊ.ಎಂ.ಎಂ.ಕಲಬುರ್ಗಿಯವರ ಹತ್ಯೆಯಲ್ಲೂ ಆರೋಪಿಗಳಾಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಇವರಲ್ಲಿ ಕೆಲವರು ಮಹಾರಾಷ್ಟ್ರದ ಜೈಲಿನಲ್ಲಿದ್ದಾರೆ. ಉಳಿದವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಆರೋಪಿಗಳನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಲಾಗುತ್ತಿದೆ.

ಈ ಮಧ್ಯೆ ಕೆಲ ಆರೋಪಿಗಳು ಜಾಮೀನು ಪಡೆಯಲು ಸೆಷನ್ಸ್ ಕೋರ್ಟ್ನಿಂದ ಹಿಡಿದು ಹೈಕೋರ್ಟ್, ಸುಪ್ರೀಂ ಕೋರ್ಟ್ ವರೆಗೂ ಪ್ರಯತ್ನಿಸಿದರೂ ಎಲ್ಲ ನ್ಯಾಯಾಲಯಗಳಲ್ಲೂ ಆರೋಪಿಗಳಿಗೆ ಜಾಮೀನು ನಿರಾಕರಣೆಯಾಗಿದೆ ಎಂಬುದು ಪ್ರಕರಣದ ಗಂಭೀರತೆಗೆ ಸಾಕ್ಷಿಯಾಗಿದೆ.

ʼಗೌರಿ ಲಂಕೇಶ್ ಅವರ ಹತ್ಯೆಯಾಗಿ ಇಂದಿಗೆ 6 ವರ್ಷಗಳು ಉರುಳಿವೆ. ಈ ಪ್ರಕರಣ ದಲ್ಲಿ ಈಗಾಗಲೇ ಹಲವು ಆರೋಪಿಗಳನ್ನು ಬಂಧಿಸಲಾಗಿದ್ದು, ಸುಮಾರು 527 ಸಾಕ್ಷಿಗಳ ಪೈಕಿ ಕೇವಲ 83 ಸಾಕ್ಷಿಗಳ ಹೇಳಿಕೆಗಳನ್ನು ನ್ಯಾಯಾಲಯ ದಾಖಲಿಸಿದೆ. ಉಳಿದ ಸಾಕ್ಷಿಗಳ ಹೇಳಿಕೆಗಳನ್ನು ಇನ್ನು ದಾಖಲಿಸಬೇಕಿದ್ದು, ಅದಕ್ಕೆ ಎರಡುಮೂರು ವರ್ಷಗಳು ಬೇಕಾಗಬಹುದು. ಈ ಹಿನ್ನೆಲೆಯಲ್ಲಿ ಗೌರಿ ಹತ್ಯೆ ವಿಚಾರಣೆಗಾಗಿ ವಿಶೇಷ ಕೋರ್ಟ್‌ ಒಂದನ್ನು ಸ್ಥಾಪಿಸುವ ಸಂಬಂಧ ಶೀಘ್ರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಗೌರಿ ಅವರಿಗೆ ಶೀಘ್ರವೇ ನ್ಯಾಯ ಲಭಿಸುತ್ತದೆ ಎಂಬ ನಂಬಿಕೆ ನಮಗಿದೆʼ

- ಕವಿತಾ, ಗೌರಿ ಲಂಕೇಶ್ ಸಹೋದರಿ, ಚಲನಚಿತ್ರ ನಿರ್ದೇಶಕಿ

----------------------------------------------

ʼಗೋವಿಂದ ಪನ್ಸಾರೆ, ಡಾ.ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಅವರ ಹತ್ಯೆಯನ್ನು ಸರಣಿಯ ರೀತಿಯಲ್ಲಿ ಮಾಡಿದ್ದಾರೆ. ಈ ಆರೋಪಿಗಳಿಗೆ ಶೀಘ್ರಗತಿಯಲ್ಲಿ ಶಿಕ್ಷೆಯಾದರೆ ಪ್ರಗತಿಪರರಿಗೆ ಒಂದು ಶಕ್ತಿ ಬಂದಂತಾಗುತ್ತದೆ. ವಿಚಾರವಾದಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ಈ ಎಲ್ಲ ದುಷ್ಕರ್ಮಿಗಳು ಸೇರಿ ಇಂತಹ ಕೃತ್ಯವನ್ನು ಎಸಗುತ್ತಿದ್ದಾರೆʼ

-ಡಾ.ಎಚ್.ಎಲ್.ಪುಷ್ಪ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ

----------------------------------------------

ʼರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದ್ದು, ಸಾಹಿತಿಗಳು, ಲೇಖಕರು, ಹೋರಾಟ ಗಾರರಿಗೆ ಬೆದರಿಕೆ ಪತ್ರಗಳು ಬರುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ‘ರವಸೆ ನೀಡಿದ್ದಾರೆ. ಜತೆಗೆ ಡಾ.ಎಂ.ಎಂ. ಕಲಬುರ್ಗಿ ಹಾಗೂ ಗೌರಿ ಲಂಕೇಶ್ ಅವರ ಹತ್ಯೆಗೆ ಸಂಬಂಧಿಸಿ ದಂತೆಯೂ ತ್ವರಿತ ನ್ಯಾಯಕ್ಕಾಗಿ ಈ ಸರಕಾರವು ಎಲ್ಲ ರೀತಿಯ ಸಹಕಾರವನ್ನು ನೀಡಲಿದೆʼ

- ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಹಿರಿಯ ಸಾಹಿತಿ

-------------------------------------------

ʼಗೌರಿ ಲಂಕೇಶ್ ಅವರ ಹತ್ಯೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ‘ಾರತೀಯ ದಂಡ ಸಂಹಿತೆಯ ಸೆಕ್ಷನ್ ಹಾಗೂ ಕೋಕಾ ಕಾಯ್ದೆಯ ಸೆಕ್ಷನ್ಗಳ ಅಡಿ ಸೆಷನ್ಸ್ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. 83 ಸಾಕ್ಷಿಗಳ ಹೇಳಿಕೆಗಳನ್ನು ನ್ಯಾಯಾಲಯ ಈಗಾಗಲೇ ದಾಖಲಿಸಿದೆ. ಉಳಿದ ಸಾಕ್ಷಿಗಳ ಹೇಳಿಕೆಗಳನ್ನು ಇನ್ನೂ ದಾಖಲಿಸಬೇಕಿದೆ. ಅದಕ್ಕೆ ಮತ್ತೊಂದಿಷ್ಟು ಸಮಯಾವಕಾಶ ಬೇಕಾಗುತ್ತದೆʼ

-ಎಸ್.ಬಾಲನ್, ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್, ಹಿರಿಯ ವಕೀಲ

---------------------------------------------

'ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ ಆರೋಪಿಗಳಿಗೆ ಇನ್ನೂ ಶಿಕ್ಷೆಯಾಗಿಲ್ಲ. ಈಗಾಗಲೇ ಅವರಿಗೆ ಕೋರ್ಟ್ ಶಿಕ್ಷೆಯನ್ನು ಪ್ರಕಟಿಸಿದ್ದರೆ, ಇನ್ನು ಮುಂದೆ ತಪ್ಪು ಎಸಗುವವರಿಗೆ ‘ಯ ಹುಟ್ಟುತ್ತಿತ್ತು. ಶೀಘ್ರವೇ ಆ ಎಲ್ಲ ಆರೋಪಿಗಳಿಗೂ ಶಿಕ್ಷೆಯಾಗಬೇಕು ಎಂಬುದು ನಮ್ಮ ಒತ್ತಾಯ'

-ಬಿ.ಎಂ.ಹನೀಫ್, ಹಿರಿಯ ಪತ್ರಕರ್ತ

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - -ಪ್ರಕಾಶ್ ಅವರಡ್ಡಿ

contributor

Similar News