ಇಂದು ಚುನಾವಣೆ ನಡೆದರೂ, ಬಿಜೆಪಿ ಗೆಲ್ಲುತ್ತೆ: ಬಿ.ಎಸ್ ಯಡಿಯೂರಪ್ಪ
Update: 2023-11-23 13:04 GMT
ಬೆಂಗಳೂರು: ಯಾರೂ ಕೂಡ ಪಕ್ಷ ಬಿಟ್ಟು ಹೋಗುವುದಿಲ್ಲ. ಇಂದು ಚುನವಣೆ ನಡೆದರೂ ಬಿಜೆಪಿ ಪಕ್ಷ ಬಹುಮತದಿಂದ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಆರ್.ಅಶೋಕ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ. ಹಾಗೂ ಮಾಜಿ ಸಚಿವ ವಿ ಸೋಮಣ್ಣ ಜೊತೆ ಕೂಡ ಮಾತನಾಡುತ್ತೇವೆ. ಸೋಮಣ್ಣ ಕೂಡ ಒಳ್ಳೆಯ ಸಂಘಟಕ. ಮುಂದಿನ ದಿನಗಳಲ್ಲಿ ಪಕ್ಷ ಬಹುಮತದಿಂದ ಅಧಿಕಾರಕ್ಕೆ ಬರುತ್ತದೆ ಎಂದರು.
ಆರ್. ಅಶೋಕ್ ಅವರನ್ನು ಪ್ರತಿಪಕ್ಷ ನಾಯಕ, ವಿಜಯೇಂದ್ರನನ್ನು ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಎಲ್ಲರೂ ಪಕ್ಷವನ್ನು ಮುನ್ನಡೆಸುತ್ತೇವೆ ಏಂದು ವಿಶ್ವಾಸ ವ್ಯಕ್ತಪಡಿಸಿದರು.