ಜಾತಿ ಜನಗಣತಿ ಬೇಡ ಎನ್ನುವವರಿಗೂ ಅದರಲ್ಲೇನಿದೆ ಎಂದು ತಿಳಿದಿಲ್ಲ: ಸಿಎಂ ಸಿದ್ದರಾಮಯ್ಯ

Update: 2023-11-23 08:41 GMT

ಬಾಗಲಕೋಟೆ: ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ʼವರದಿಯಲ್ಲಿ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಾಗಲಕೋಟೆಯ ನವನಗರದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು ಅವರು "ವರದಿ ಸಲ್ಲಿಕೆಯಾದ ನಂತರ ನೋಡೋಣ. ಸುಮ್ಮನೆ ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ" ಎಂದರು.

ಮೂಲ ವರದಿ ಕಳೆದುಹೋಗಿದೆ ಎಂದು ಹಾಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಯಪ್ರಕಾಶ್ ಹೇಳಿಕೆ ಬಗ್ಗೆ ಮಾತನಾಡಿದ ಸಿಎಂ, ಅವರನ್ನು ಕರೆದು ಮಾತನಾಡುತ್ತೇನೆ ಎಂದರು.

ಹೇಳಿಕೆ ನೀಡುವಾಗ ಸತ್ಯಾಂಶವನ್ನು ಆಧಾರಿಸಿರಬೇಕು;

ʼಜಾತಿ ಜನಗಣತಿ ಸಮಾಜವನ್ನು ಒಡೆಯುತ್ತದೆ ಎಂದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರಿಗೆ ವರದಿಯಲ್ಲಿ ಏನಿದೆ ಎಂದು ಅವರಿಗೆ ಗೊತ್ತಿದೆಯೇ ಎಂದರು. ಯಾರೇ ಆಗಲಿ ಗೊತ್ತಿಲ್ಲದೆ ಮಾತನಾಡಬಾರದು. ಸಮಾಜ ಏಕೆ ಒಡೆಯುತ್ತವೆ? ಎಂದು ಪ್ರಶ್ನಿಸಿದರು. ನಿತೀಶ್ ಕುಮಾರ್ ಬಿಹಾರದಲ್ಲಿ ಜಾತಿಗಣತಿ ಸ್ವೀಕರಿಸಿದ್ದಾರೆ. ಅವರು ಸಮಾಜ ಒಡೆದುಬಿಟ್ಟರೆ ʼ ಎಂದು ಕೇಳಿದರು.

ಯಾವುದೇ ಹೇಳಿಕೆ ನೀಡುವಾಗ ಅದು ಸತ್ಯಾಂಶದ ಮೇಲೆ ಅವಲಂಬಿತವಾಗಿರಬೇಕು ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News