ʼಎಕ್ಸಿಟ್ ಪೋಲ್ʼ ಒಂದು ಪಕ್ಷಕ್ಕೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಪ್ರಕಟವಾಗಿವೆ : ಎಚ್.ಕೆ.ಪಾಟೀಲ್
ಬೆಂಗಳೂರು: ಚುನಾವಣೋತ್ತರ ಸಮೀಕ್ಷಾ ವರದಿಗಳು ಒಂದು ಪಕ್ಷಕ್ಕೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಪ್ರಕಟವಾಗಿವೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೋತ್ತರ ಸಮೀಕ್ಷಾ ವರದಿಗಳು ಹುಸಿಯಾಗಲಿವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 16ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಈಗಾಗಲೇ ಕಾಂಗ್ರೆಸ್ ಪಕ್ಷ ಮಾತ್ರವಲ್ಲದೆ, ಹಲವಾರು ತಜ್ಞರು ಕಾಂಗ್ರೆಸ್ ಪರವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಆದರೆ ಚುನಾವಣೋತ್ತರ ಸಮೀಕ್ಷಾ ವರದಿಗಳು ಒಂದು ಪಕ್ಷಕ್ಕೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಪ್ರಕಟವಾಗಿವೆ ಎಂದರು.
ನಾವು ಇದನ್ನು ನಂಬುವುದಿಲ್ಲ. ಪ್ರಜಾಪ್ರಭುತ್ವಕ್ಕೆ ಗೆಲುವಾಗುವ ವಿಶ್ವಾಸವಿದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ಸಾಕಷ್ಟು ಸತ್ಯಾಂಶಗಳನ್ನು ಹುಡುಕಲಾಗಿದೆ. ಉತ್ತರ ಪ್ರದೇಶ, ಕರ್ನಾಟಕ ಸೇರಿದಂತೆ ಹಲವು ಕಡೆ ಕಾಂಗ್ರೆಸ್‍ಗೆ ನಕಾರಾತ್ಮಕವಾಗಿ ಬಿಂಬಿಸಲಾಗಿದೆ ಎಂದು ಹೇಳಿದರು.