ಯಾವುದೇ ನೊಟೀಸ್ ನೀಡದೆ ಬಿಜೆಪಿಯಿಂದ ಉಚ್ಚಾಟನೆ: ಮಾಜಿ ಶಾಸಕ ಟಿ. ಗುರುಸಿದ್ದನಗೌಡ ಆಕ್ರೋಶ

Update: 2023-09-07 09:56 GMT

ದಾವಣಗೆರೆ: ವಿಧಾನಸಭಾ ಚುನಾವಣೆ ವೇಳೆ ಜಗಳೂರು ಕ್ಷೇತ್ರದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ ಹಿನ್ನೆಲೆಯಲ್ಲಿ  ಬಿಜೆಪಿಯಿಂದ ಉಚ್ಛಾಟನೆ ಮಾಡಿರುವ ಬಗ್ಗೆ ಮಾಜಿ ಶಾಸಕ ಟಿ. ಗುರುಸಿದ್ದನಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಷಡ್ಯಂತ್ರ ಹಾಗೂ ಕುತಂತ್ರ ರೂಪಿಸಿ ಬಿಜೆಪಿಯಿಂದ ಉಚ್ಚಾಟಿಸಲಾಗಿದೆ. ನನಗೆ ಯಾವುದೇ ನೊಟೀಸ್ ನೀಡದೆ ಪಕ್ಷದಿಂದ ಉಚ್ಟಾಟನೆ ಮಾಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ʼʼಬಿಜೆಪಿ ರಾಷ್ಟ್ರೀಯ ಘಟಕ ಹಾಗೂ ರಾಜ್ಯ ಘಟಕದ ಗಮನಕ್ಕೆ ತರದೆ ಉಚ್ಚಾಟನೆ ಮಾಡಿರುವುದು ಸರಿಯಾದ ಕ್ರಮವಲ್ಲ. ಯಾವುದೇ ಮಾಹಿತಿ ನೀಡದೆ ಈ ಕ್ರಮ ಜರುಗಿಸಿರುವುದರ ಹಿಂದೆ ಯಾರ ಷಡ್ಯಂತ್ರ ಇದೆ ಎಂಬುದು ಸದ್ಯದಲ್ಲಿಯೇ ಗೊತ್ತಾಗಲಿದೆʼʼ ಎಂದು ಅವರು ಹೇಳಿದರು. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News