ಹೆಸರುಕಾಳು ಖರೀದಿ ಅವಧಿ ವಿಸ್ತರಣೆ: ಸಚಿವ ಶಿವಾನಂದ ಪಾಟೀಲ

Update: 2024-11-15 09:34 GMT

ಬೆಂಗಳೂರು, ನ.15: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18ರ ವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಈ ಮೊದಲು ಖರೀದಿ ಅವಧಿಯನ್ನು ನವೆಂಬರ್ 21ರ ವರೆಗೆ ನಿಗದಿಪಡಿಸಲಾಗಿತ್ತು. ರಾಜ್ಯ ಸರಕಾರದ ಕೋರಿಕೆ ಮೇರೆಗೆ ಕೇಂದ್ರ ಸರಕಾರ ಡಿಸೆಂಬರ್ 18ರ ವರೆಗೆ ಖರೀದಿ ಮಾಡಲು ಅನುಮತಿ ನೀಡಿದೆ. ಪ್ರತಿ ಕ್ವಿಂಟಾಲ್ ಗೆ ರೂ 8,682 ನಿಗದಿಪಡಿಸಲಾಗಿದ್ದು, ಇದುವರೆಗೆ 20,450 ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ.

ಬೆಳಗಾವಿ, ಬೀದರ್, ಧಾರವಾಡ, ಗದಕ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News