ಸಾಮಾಜಿಕ ಜಾಲತಾಣಗಳಲ್ಲಿ HSRP ನಕಲಿ ಲಿಂಕ್: ಎಚ್ಚರಿಕೆ ವಹಿಸುವಂತೆ ಸೂಚನೆ

Update: 2024-02-18 15:08 GMT

ಬೆಂಗಳೂರು: ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್(HSRP) ನೋಂದಣಿ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಲಿಂಕ್‍ಗಳು ಶೇರ್ ಆಗುತ್ತಿವೆ. ಇದರ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ದಕ್ಷಿಣ ವಲಯದ ಸಂಚಾರ ಡಿಸಿಪಿ ಶಿವಪ್ರಕಾಶ್ ದೇವರಾಜ್ ತಿಳಿಸಿದ್ದಾರೆ.

ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, HSRP ನೋಂದಣಿಗೆ ಸಂಬಂಧಿಸಿದಂತೆ ಅಧಿಕೃತ ಜಾಲತಾಣಗಳ ಮೂಲಕ ಮಾತ್ರ ಅರ್ಜಿ ಹಾಕಬೇಕು. ಒಮ್ಮೊಮ್ಮೆ ವೆಬ್‍ಸೈಟ್ ಸರಿಯಾಗಿದೆಯಾ ಎಂಬುದನ್ನು ಖಚಿತಪಡಿಸಿಕೊಂಡು ನಂತರ ಹಣ ಪಾವತಿಸಬೇಕು. ಸಮಸ್ಯೆ ಕಂಡು ಬಂದರೆ ಕೂಡಲೇ ಸೈಬರ್ ಕ್ರೈಂ ಠಾಣೆಗೆ ದೂರು ನೀಡಬೇಕು ಎಂದರು.

HSRP ನೋಂದಣಿ ಮಾಡಿಕೊಳ್ಳುವ ಭರದಲ್ಲಿ ಸಾರ್ವಜನಿಕರು ನಕಲಿ ಲಿಂಕ್‍ಗಳ ಮೇಲೆ ಕ್ಲಿಕ್ ಮಾಡಿ ಮೋಸ ಹೋಗಬಾರದು. ಅಧಿಕೃತ ಲಿಂಕ್ ಒತ್ತಿ ನೋಂದಣಿ ಮಾಡಿಸಬೇಕು. ಈ ಬಗ್ಗೆ ಅನುಮಾನವಿದ್ದಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳನ್ನು ಸಹ ಸಂಪರ್ಕಿಸಬಹುದು ಎಂದು ಶಿವಪ್ರಕಾಶ್ ದೇವರಾಜ್ ಮನವಿ ಮಾಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News