ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ : ಡಿ.ಕೆ.ಶಿವಕುಮಾರ್ ಸೇರಿ ಇಬ್ಬರ ವಿರುದ್ಧ ಎಫ್‍ಐಆರ್ ದಾಖಲು
Update: 2024-04-01 12:48 GMT
ಬೆಂಗಳೂರು : ಕಾಂಗ್ರೆಸ್ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಬಿ.ಆರ್.ನಾಯ್ಡು ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿರುವುದು ವರದಿಯಾಗಿದೆ.
ಬಿಜೆಪಿ ಕಾನೂನು ಪ್ರಕೋಷ್ಟ ಮಾಜಿ ಸಂಚಾಲಕ ಯೋಗೇಂದ್ರ ಹೊಡಘಟ್ಟ ಅವರು ಈ ಕುರಿತು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.
ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್ ಅನ್ನು ಕಾಂಗ್ರೆಸ್ ಪಕ್ಷ ಹಂಚಿಕೊಂಡಿತ್ತು. ಆದ್ದರಿಂದ ಫೋರ್ಜರಿ, ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪದ ಮೇಲೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತನಿಖೆಗೆ ಆದೇಶಿಸಿತ್ತು. ಇದೀಗ ಡಿ.ಕೆ.ಶಿವಕುಮಾರ್ ಮತ್ತು ಬಿ.ಆರ್.ನಾಯ್ಡು ವಿರುದ್ಧ 153(ಎ), 504, 506, 464 ಸೆಕ್ಷನ್ ಅಡಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಗೊತ್ತಾಗಿದೆ.