ಬಿಬಿಎಂಪಿ ಆವರಣದಲ್ಲಿ ಅಗ್ನಿ ಅವಘಡ; ಪೊಲೀಸ್ ತನಿಖೆಗೆ ಸಿಎಂ ಸೂಚನೆ
Update: 2023-08-11 18:36 GMT
ಬೆಂಗಳೂರು, ಆ. 11: ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿನ ಕಟ್ಟದಲ್ಲಿ ನಡೆದ ಅಗ್ನಿ ಅವಘಡ ಪ್ರಕರಣ ಸಂಬಂಧ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಈ ಕುರಿತು ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್, ''ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಬಿಬಿಎಂಪಿಯ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಾಯಗೊಂಡಿರುವ ಸಿಬ್ಬಂದಿಯ ಯೋಗಕ್ಷೇಮ ವಿಚಾರಿಸಿದೆ. ಎಲ್ಲರನ್ನೂ ಟ್ರಾಮಾ ಸೆಂಟರ್ ಗೆ ಶಿಫ್ಟ್ ಮಾಡಿ ಉತ್ತಮ ಚಿಕಿತ್ಸೆ ನೀಡಲು ತಿಳಿಸಲಾಗಿದೆ. ಘಟನೆ ಬಗ್ಗೆ ಪ್ರತ್ಯೇಕ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಮತ್ತು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ'' ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ಸಿಎಂ, ಡಿಸಿಎಂ