ಬೆಂಗಳೂರಿನ ಅತ್ತಿಬೆಲೆಯಲ್ಲಿ ಪಟಾಕಿ ದುರಂತ; ಸಿಎಂ ಸಿದ್ದರಾಮಯ್ಯ ಸಂತಾಪ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಅತ್ತಿಬೆಲೆಯ ಪಟಾಕಿ ಗೋದಾಮಿನ ಬಳಿ ಬೃಹತ್ ಪ್ರಮಾಣದಲ್ಲಿ ಪಟಾಕಿಗಳನ್ನು ಲಾರಿಯಿಂದ ಇಳಿಸುವಾಗ ಆಕಸ್ಮಿಕ ಬೆಂಕಿ ತಗುಲಿ ಸ್ಫೋಟ ಸಂಭವಿಸಿದ ಪರಿಣಾಮ 12 ಮಂದಿ ಮೃತಪಟ್ಟಿದ್ದು, ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಅವರು, ʼʼಬೆಂಗಳೂರು ನಗರ ಜಿಲ್ಲೆ ಆನೇಕಲ್ ಸಮೀಪ ಅತ್ತಿಬೆಲೆಯ ಪಟಾಕಿ ಸಂಗ್ರಹ ಮಳಿಗೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 12 ಮಂದಿ ಮೃತಪಟ್ಟ ಸುದ್ದಿ ತಿಳಿದು ಅತೀವ ನೋವಾಯಿತು. ದುರ್ಘಟನೆ ನಡೆದ ಸ್ಥಳಕ್ಕೆ ನಾಳೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದೇನೆ. ಮೃತ ಕಾರ್ಮಿಕರ ಕುಟುಂಬಕ್ಕೆ ನನ್ನ ಸಂತಾಪಗಳುʼʼ ಎಂದು ತಿಳಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆ ಆನೇಕಲ್ ಸಮೀಪ ಅತ್ತಿಬೆಲೆಯ ಪಟಾಕಿ ಸಂಗ್ರಹ ಮಳಿಗೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 12 ಮಂದಿ ಮೃತಪಟ್ಟ ಸುದ್ದಿ ತಿಳಿದು ಅತೀವ ನೋವಾಯಿತು. ದುರ್ಘಟನೆ ನಡೆದ ಸ್ಥಳಕ್ಕೆ ನಾಳೆ ಭೇಟಿನೀಡಿ, ಪರಿಶೀಲನೆ ನಡೆಸಲಿದ್ದೇನೆ.ಮೃತ ಕಾರ್ಮಿಕರ ಕುಟುಂಬಕ್ಕೆ ನನ್ನ ಸಂತಾಪಗಳು. - ಮುಖ್ಯಮಂತ್ರಿ @siddaramaiah pic.twitter.com/5aCXpbCU8w
— CM of Karnataka (@CMofKarnataka) October 7, 2023
ʼಅತ್ತಿಬೆಲೆ ಠಾಣಾ ವ್ಯಾಪ್ತಿಯ ಪಟಾಕಿ ಗೋದಾಮಿನಲ್ಲಿ ಪಟಾಕಿ ಶೇಖರಣೆ ಮಾಡುವಾಗ ಅವಘಡ ಸಂಭವಿಸಿದೆ. ಮಾಹಿತಿ ಬಂದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಘಟನೆಯಲ್ಲಿ ಬಹುತೇಕ ಬೆಂಕಿ ನಂದಿಸಲಾಗಿದೆ, ಒಳಗಡೆ ಇನ್ನು ಸ್ವಲ್ಪ ಬೆಂಕಿಯಿದ್ದು ಕಾರ್ಯಾಚರಣೆ ಮುಂದುವರೆದಿದೆ. ಇಲ್ಲಿಯವರೆಗೆ 12 ಜನರ ಮೃತದೇಹಗಳು ದೊರೆತಿವೆ, ಆರು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾನೂನುಬಾಹಿರವಾಗಿ ಪಟಾಕಿ ಉದ್ಯಮ ನಡೆಸುತ್ತಿದ್ದ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಘಟನೆ ಹೇಗೆ ನಡೆದಿದೆ ಎಂಬುದರ ತನಿಖೆ ನಡೆಸಲಾಗುತ್ತಿದೆ. ನಾವು ಮತ್ತು ಜಿಲ್ಲಾ ಪೊಲೀಸರು ತನಿಖೆ ಮಾಡುತ್ತೇವೆ. ಮೇಲ್ನೋಟಕ್ಕೆ ಸುರಕ್ಷತಾ ಕ್ರಮಗಳ ಉಲ್ಲಂಘನೆಯಾಗಿರುವುದು ಕಂಡುಬಂದಿದೆ. ನಿಯಮ ಉಲ್ಲಂಘನೆ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಅವಘಡಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆʼ
-ಕಮಲ್ ಪಂತ್, ಡಿಜಿ, ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ