MLA, MP, ನಿಗಮ ಮಂಡಳಿಗೆ ಅರ್ಜಿ ಹಾಕುವ ಮೊದಲು ಸ್ಥಳೀಯ ಸಂಸ್ಥೆಗಳ ಬಗ್ಗೆ ಗಮನಹರಿಸಿ: ಕಾರ್ಯಕರ್ತರಿಗೆ ಡಿಕೆಶಿ ಸಲಹೆ

Update: 2023-11-14 08:40 GMT

ಬೆಂಗಳೂರು: ''ನೆಹರೂ ಅವರು ಅಲಹಬಾದ್ ಪಾಲಿಕೆ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಆಗಿನ ಕಾಲದಲ್ಲೇ ಸ್ಥಳಿಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿ ನಾಯಕರಾಗಿ ಬೆಳೆದಿದ್ದಾರೆ. ಕೇವಲ ಎಂಎಲ್ಎ, ಎಂಪಿ ಚುನಾವಣೆಗೆ, ನಿಗಮಮಂಡಳಿಗೆ ಅರ್ಜಿ ಹಾಕುವುದು ಹಾಗಿರಲಿ, ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆಯ ಬಗ್ಗೆ ಗಮನಹರಿಸಿ'' ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಾ‍ರ್ಯಕರ್ತರಿಗೆ ಸಲಹೆ ಮಾಡಿದ್ದಾರೆ. 

ಕೆಪಿಸಿಸಿ ಕಚೇರಿಯಲ್ಲಿ ಜವಾಹರಲಾಲ್ ನೆಹರೂ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ನಾನು ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದೆ. ಸಿದ್ದರಾಮಯ್ಯ ಅವರು 1977ರಲ್ಲಿ ತಾಲೂಕು ಬೋರ್ಡ್ ಸದಸ್ಯರಾಗಿದ್ದರು' ಎಂದರು. 

'ಪಕ್ಷದ ಕಾರ್ಯಕ್ರಮಗಳಲ್ಲಿ ಭಾಷಣ ಮಾಡಲು ಯಾರಿಗೆ ಆಸಕ್ತಿ ಇದೆ ಅಂತಹವರು ಮುಂಚಿತವಾಗಿ ಹೆಸರು ಕೊಟ್ಟರೆ ಅವರಲ್ಲಿ ಒಒಬ್ಬರಿಗೆ ಐದು ನಿಮಿಷಗಳ ಕಾಲ ಮಾತನಾಡಲು ಅವಕಾಶ ಕಲ್ಪಿಸುತ್ತೇವೆ. ನ.19ರಂದು ಇಂದಿರಾ ಗಾಂಧಿ ಅವರ ಜನ್ಮದಿನ ಕಾರ್ಯಕ್ರಮವಿದ್ದು, ಅಲ್ಲಿ ನಿಮಗೆ ಅವಕಾಶ ನೀಡುತ್ತೇವೆ. ಅಂದು ಬೆಂಗಳೂರಿನ ನೂತನ ಐವರು ಜಿಲ್ಲಾಧ್ಯಕ್ಷರುಗಳ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ನಂತರ ತಮ್ಮ ಜಿಲ್ಲೆಗಳಲ್ಲಿ ಪ್ರತ್ಯೇಕ ಕಾರ್ಯಕ್ರಮ ಮಾಡುತ್ತಾರೆ. ಇನ್ನು ಮುಂದೆ ನಾವೆಲ್ಲರೂ ಜನರ ಮಧ್ಯೆ ಇದ್ದು ಕೆಲಸ ಮಾಡಬೇಕು. ನೀವೆಲ್ಲರೂ ಸೇರಿ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದು, ಸರ್ಕಾರದ ಕಾರ್ಯಕ್ರಮಗಳು ಜನರಿಗೆ ತಲುಪುವಂತೆ ಮಾಡಬೇಕು. ನಾಳೆ ಇಬ್ಬರು ಪ್ರಮುಖ ನಾಯಕರು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ' ಎಂದು ಅವರು ಮಾಹಿತಿ ನೀಡಿದರು. 


Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News