ಹಾವೇರಿ ಅತ್ಯಾಚಾರ ಸಂತ್ರಸ್ಥೆಗೆ ಸರ್ಕಾರಿ ವ್ಯವಸ್ಥೆಯಲ್ಲಿ ಚಿಕಿತ್ಸೆಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ

Update: 2024-01-16 11:01 GMT

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಹಾವೇರಿ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್ ಐಟಿ ರಚಿಸಲು ನಿರಾಕರಣೆ ಮಾಡಿರುವುದು ಒಂದು ರೀತಿಯಲ್ಲಿ ಈಗಾಗಲೇ ಕೇಸ್ ತಿರುಚುವ ಮುಖಾಂತರ ಸ್ಥಳಿಯ ಪೊಲೀಸರು ಪ್ರಕರಣ ಮುಚ್ಚಿಹಾಕುವುದಕ್ಕೆ ಲೈಸೆನ್ಸ್ ಕೊಟ್ಟಂತಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಎಸ್ ಐಟಿ ರಚಿಸಲು ನಿರಾಕರಣೆ ಮಾಡಿರುವ  ಮುಖ್ಯಮಂತ್ರಿಗಳ ನಿಲುವನ್ನು ಖಂಡಿಸುತ್ತೇನೆ. ಅವರಿಗೆ ಸಂತ್ರಸ್ತ ಮಹಿಳೆಗೆ ನ್ಯಾಯಕೊಡಿಸುವ ಉದ್ದೇಶ ಇದ್ದರೆ ಕೂಡಲೇ ಎಸ್ ಐಟಿ ರಚನೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಹಾವೇರಿ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ಥೆಗೆ ಸರಿಯಾದ ವೈದ್ಯಕೀಯ ಚಿಕಿತ್ಸೆ ಇಲ್ಲದೆ ಮನೆಗೆ ಕಳಿಸಿರುವುದಕ್ಕೆ ಸಿಎಂ ಬಳಿ ಉತ್ತರ ಇಲ್ಲ. ಹಾಗೂ ಅವಳಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಲು ಕಾಂಗ್ರೆಸ್ ಪಕ್ಷದ ಶಾಸಕರಿಗೆ ಹೇಳಿರುವುದು. ಸರ್ಕಾರ ಇಷ್ಟು ದೊಡ್ಡ ಆರೋಗ್ಯ ಇಲಾಖೆ ಇದ್ದು, ಅವಳಿಗೆ ಸೂಕ್ತ ಚಿಕಿತ್ಸೆ ಕೊಡಲು ತಯಾರಿಲ್ಲ ಎಂದರೆ, ಮತ್ತು ಆ ಜವಾಬ್ದಾರಿಯನ್ನು ತಮ್ಮ ಶಾಸಕರಿಗೆ ವಹಿಸಿರುವಂಥದ್ದು ಈ ಪ್ರಕರಣವನ್ನು ಮುಚ್ಚಿ ಹಾಕುವ ಹಾಗೂ ಆ ಹೆಣ್ಣು ಮಗಳನ್ನು ಸಂಪೂರ್ಣ ಹತೋಟಿಗೆ ತೆಗೆದುಕೊಳ್ಳುವ ತಂತ್ರ ಗೊತ್ತಾಗುತ್ತದೆ. ಆದ್ದರಿಂದ ಅವಳಿಗೆ ಚಿಕಿತ್ಸೆಯನ್ನು ಸಂಪೂರ್ಣ ಸರ್ಕಾರಿ ವ್ಯವಸ್ಥೆ ಯಲ್ಲಿಯೇ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News