ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿತಿ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ ಆಸ್ಪತ್ರೆ

Update: 2023-08-30 15:11 GMT

ಬೆಂಗಳೂರು: ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆ ಹೇಳಿಕೆ ಬಿಡುಗಡೆ ಮಾಡಿದೆ.

ಇಂದು (ಆಗಸ್ಟ್ 30) ಬೆಳಗಿನ ಜಾವ 3:40ರ ವೇಳೆಗೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ಕುಮಾರಸ್ವಾಮಿ ದಾಖಲಾಗಿದ್ದಾರೆ ಎಂದು ಮಾಹಿತಿ ನೀಡಿರುವ ಆಸ್ಪತ್ರೆ, ನಿಶಕ್ತಿಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿರುವ ಕುಮಾರಸ್ವಾಮಿಯವರಿಗೆ ಡಾ. ಸತೀಶ್ಚಂದ್ರ ಹಾಗೂ ತಂಡ ಚಿಕಿತ್ಸೆ ನೀಡುತ್ತಿದೆ. ಅವರು ಚಿಕಿತ್ಸೆಗೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದೆ. 

ಚಿಕಿತ್ಸೆಗೆ ಸ್ಪಂದಿಸುತ್ತಿರುವ ಕುಮಾರಸ್ವಾಮಿಯವರ ಆರೋಗ್ಯ ಪರಿಸ್ಥಿತಿ ಸದ್ಯ ಸ್ಥಿರವಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ. 

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News